ಬೆಂಗಳೂರು : ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಕಡಿಮೆ ಆಗುವವರೆಗೆ ಶಾಲೆಗಳನ್ನು ಪ್ರಾರಂಭ ಮಾಡುವುದು ಬೇಡ ಎಂದು ಸಾಕಷ್ಟು ಜನ ಪೋಷಕರು ಹೇಳಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ನ ಫೇಸ್ ಬುಕ್ ಖಾತೆಯಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆ ರಾಜ್ಯದ ವಿವಿಧ ಭಾಗದ ಪೋಷಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಮಯದಲ್ಲಿ ಆತುರವಾಗಿ ಶಾಲೆಗಳನ್ನು ಓಪನ್ ಮಾಡುವುದು ಬೇಡ. ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾದಾಗ ಶಾಲೆಗಳನ್ನು ಓಪನ್ ಮಾಡಿ ಎಂದು ಹೇಳಿದ್ದಾರೆ.
ಇದಕ್ಕೆ ವಿಚಾರಕ್ಕೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೋನಾ ಸಂದರ್ಭದಲ್ಲಿ ಶಾಲೆ ತೆರೆಯುವ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿದ್ದರು, ಪತ್ರ ಬರೆದಿದ್ದಾರೆ. ನಾನು ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ನೀವು ಪೋಷಕರ ಜತೆ ಚರ್ಚಿಸಿ. ಪ್ರತಿ ಪೋಷಕರಿಗೂ ಅವರ ಮಕ್ಕಳ ವಿಚಾರವಾಗಿ ಆತಂಕವಿರುತ್ತದೆ. ಶಿಕ್ಷಣ ಸಂಸ್ಥೆಗಳು ಕೂಡ ಪಾಠದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಅವರೊಂದಿಗೆ ಕೂತು ಚರ್ಚಿಸಿ ಎಂದಿದ್ದೇನೆ. ಸರ್ಕಾರದ ಆಡಳಿತದಲ್ಲಿ ನಾನು ಹಸ್ತಕ್ಷೇಪ ಮಾಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಆನ್ ಲೈನ್ ಶಿಕ್ಷಣ ನೀಡುವುದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರು ನಗರದೊಳಗೆಯೇ ಇಂಟರ್ನೆಟ್ ಸಿಗುತ್ತಿಲ್ಲ. ನನ್ನ ಮನೆಯಲ್ಲಿ ಇಂಟರ್ನೆಟ್ ಲೋಡ್ ಆಗುತ್ತಿಲ್ಲ. ಅದಕ್ಕಾಗಿ ಪೋಷಕರು ಆನ್ ಲೈನ್ ಶಿಕ್ಷಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಬೀದಿಗೆ ತಂದು ನಿಲ್ಲಿಸಬೇಡಿ ಎಂದು ಹೇಳಿದ್ದಾರೆ.








