ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ನಾಡದೇವತೆ ಚಾಮುಂಡೇಶ್ವರಿ (Chamundeshwari) ಸನ್ನಿಧಾನದಲ್ಲಿ ಬೆಳಗ್ಗೆ 9.29ಕ್ಕೆ ಶುಭ ಲಗ್ನದಲ್ಲಿ ನಾಡೋಜ, ಸಾಹಿತಿ ಹಂಪ ನಾಗರಾಜಯ್ಯ ಉದ್ಘಾಟಿಸಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಸರ್ಕಾರ ಉರುಳಿಸುವ ದುರಾಲೋಚನೆ ಬೇಡ ಎಂದು ಸಾಹಿತಿ ಹಂಪ ನಾಗರಾಜಯ್ಯ ಕಿವಿ ಮಾತು ಹೇಳಿದ್ದಾರೆ. ದಸರಾ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತವಾಗಿದೆ. ದಸರಾ ಅರಮನೆಯ ಹಬ್ಬವಲ್ಲ. ಅದು ಜನರಿಂದ ಆಯ್ಕೆಯಾದ ಸರ್ಕಾರದಿಂದ ಆಚರಿಸಿದ ಹಬ್ಬ ಎಂದು ಹೇಳಿದ್ದಾರೆ.
ವಿರೋಧ ಪಕ್ಷಳು ಏನೇ ಅಡ್ಡಿ ಮಾಡದರೂ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಶಿವಕುಮಾರ್ (DCM Shivakumar) ಎದೆಗುಂದದೆ ಸಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ. ಅದರಲ್ಲಿ ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ ಸೌಮ್ಯತೆ ದೌರ್ಬಲ್ಯವಲ್ಲ. ಪ್ರತಿಕೂಲ ಪ್ರವಾಹವನ್ನು ಎದುರಿಸುವ ಧೀಶಕ್ತಿ ಎಂದಿದ್ದಾರೆ.
ಇಸ್ರೇಲ್ – ಪ್ಯಾಲೆಸ್ಟೈನ್, ರಷಿಯಾ – ಉಕ್ರೈನ್ ಯುದ್ದ ನಿಲ್ಲಲಿ. ಹೆಣ್ಣು ಭ್ರೂಣ ಹತ್ಯೆ ನಿಲ್ಲಲಿ. ಶಾಸನಸಭೆಯಲ್ಲಿ ಸ್ತೀಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿ. ಸರ್ಕಾರ ಉರುಳಿಸುವ ದುರಾಲೋಚನೆ ಬರದಂತೆ ತಡೆದು ಚುನಾಯಿತ ಸರ್ಕಾರಗಳು ಉಳಿಯುವ ಚಿಂತನೆ ಮೂಡಲಿ ಎಂದು ಹೇಳಿದ್ದಾರೆ.
ಕೆಡವುದು ಸುಲಭ, ಕಟ್ಟುವುದು ಕಷ್ಟ. ಮತ್ತೆ ಮತ್ತೆ ಚುನಾವಣೆ ಬರುವುದು ಬೇಡ. ಯಾವ ಪಕ್ಷವೂ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದು ಅಸಾಧ್ಯ. ಸೋತ ಪಕ್ಷವೂ ಮತ್ತೆ ಅಧಿಕಾರ ಬರಲಿದೆ. ಆದರೆ, ಅಧಿಕಾರದಿಂದ ಕೆಳಗೆ ಉರುಳಿಸುವ ಕೆಲಸ ಮಾಡಬಾರದು ಎಂದಿದ್ದಾರೆ.







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
