ಮೈಸೂರು : ಸಾಹಿತ್ಯ ಕ್ಷೇತ್ರದಿಂದ ವಿಧಾನಪರಿಪತ್ ಗೆ ನೇಮಕ ಆಗಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮಂತ್ರಿ ಆಗುವ ಆಸೆ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತ, ನಾನು ಮಿನಿಸ್ಟರ್ ಆಗಲ್ಲ ಅಂತ ನಿಮಗೆ ಅನುಮಾನಾ? ಎಂದು ಮರು ಪ್ರಶ್ನೆ ಹಾಕಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂಪುಟದಲ್ಲಿ ನನಗೂ ಮಂತ್ರಿಯಾಗುವ ಆಸೆ ಇದೆ. ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಅಧಿಕಾರದ ಆಸೆ ಇರುತ್ತದೆ. ಹಾಗೆಯೇ ನನಗೂ ಮಂತ್ರಿಯಾಗುವ ಆಸೆ ಇದೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು.
ವಿಶ್ವನಾಥ್ ಭಿಕ್ಷುಕ ಅವರ ಬಗ್ಗೆ ಮಾತನಾಡಲ್ಲ ಎಂದು ಶಾಸಕ ಸಾ.ರಾ ಮಹೇಶ್ ಹೇಳಿಕೆಗೆ ತಿರುಗೇಟು ನೀಡಿದ ಹೆಚ್, ವಿಶ್ವನಾಥ್ , ಸಾರ ಮಹೇಶ್ ಕೊಚ್ಚೆಗುಂಡಿ ಎಂದು ಮೊದಲೇ ಹೇಳಿದ್ದೇನೆ. ನಾನು ಶುಭ್ರವಾದ ಬಟ್ಟೆ ಹಾಕಿದ್ದೇನೆ. ಕೊಚ್ಚೆಗುಂಡಿಗೆ ಕಲ್ಲು ಹೊಡೆದು ನಾನೇಕೆ ನನ್ನ ಬಟ್ಟೆ ಕೊಚ್ಚೆ ಮಾಡಿಕೊಳ್ಳಲಿ. ನಾನು ಅವರ ಬಗ್ಗೆ ಏನು ಮಾತನಾಡುವುದಿಲ್ಲ ಎಂದರು.








