BJP | ಸಿದ್ದರಾಮಯ್ಯ ಅವರೇ ನಿಮಗೆ ನೈತಿಕತೆ ಇದೆಯೇ?
ಬೆಂಗಳೂರು : ಆತ್ಮಸಾಕ್ಷಿ! ಸಿದ್ದರಾಮಯ್ಯ ಅವರೇ ಈ ಶಬ್ದ ಪ್ರಯೋಗ ಮಾಡುವುದಕ್ಕೆ ನಿಮಗೆ ನೈತಿಕತೆ ಇದೆಯೇ ಎಂದು ಪ್ರಶ್ನೆ ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯ, ಆತ್ಮಸಾಕ್ಷಿ! ಸಿದ್ದರಾಮಯ್ಯ ಅವರೇ ಈ ಶಬ್ದ ಪ್ರಯೋಗ ಮಾಡುವುದಕ್ಕೆ ನಿಮಗೆ ನೈತಿಕತೆ ಇದೆಯೇ? ಆತ್ಮವಂಚಕತನಕ್ಕೆ ನಿಮಗಿಂತ ಬೇರೆ ಉದಾಹರಣೆ ಇಲ್ಲ. ಹೀಗಿರುವಾಗ ಇಂಥ ಪದ ಬಳಕೆ ನಿಮಗೆ ಶೋಭೆಯಲ್ಲ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, 24 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಕೊಲೆ ನಡೆದು ಹೋಯಿತು. ಮಾನ್ಯ ಸಿದ್ದರಾಮಯ್ಯ ಅವರೇ, ನಿಮ್ಮ ಆತ್ಮಸಾಕ್ಷಿ ಆಗ ಎಲ್ಲಿ ಹೋಗಿತ್ತು?
2013 ರಿಂದ 2017 ರ ಅವಧಿಯಲ್ಲಿ ಕರ್ನಾಟಕದಲ್ಲಿ 3 ಸಾವಿರಕ್ಕೂ ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿತ್ತು. ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುವಾಗ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿ ಎಲ್ಲಿತ್ತು?
ನಾನು ರೈತ ಪರ. ನಾನು ನಂಜುಂಡಸ್ವಾಮಿ ಅವರ ಶಿಷ್ಯ ಎಂದು ಭಾಷಣ ಬಿಗಿಯುವ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರೈತರು ಕುಡಿದು ಸತ್ತರು ಎಂದು ಹೇಳಿಕೆ ನೀಡಿ ರೈತರಿಗೆ ಅವಮಾನ ಮಾಡಿದ್ದರು.
ಸಿದ್ದರಾಮಯ್ಯನವರೇ, ಇದೇನಾ ನಿಮ್ಮ ಆತ್ಮಸಾಕ್ಷಿ?#ಸಿದ್ದುಆತ್ಮಸಾಕ್ಷಿ
— BJP Karnataka (@BJP4Karnataka) June 10, 2022
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಆದಾಗ, ಅಂದಿನ ಗೃಹ ಸಚಿವ ಜಾರ್ಜ್ ಹಿಂದೆ ನಿಂತಾಗ ಸಿದ್ದರಾಮಯ್ಯ ಅವರ ಆತ್ಮಸಾಕ್ಷಿ ಎಲ್ಲಿತ್ತು?.
ನಾನು ರೈತ ಪರ. ನಾನು ನಂಜುಂಡಸ್ವಾಮಿ ಅವರ ಶಿಷ್ಯ ಎಂದು ಭಾಷಣ ಬಿಗಿಯುವ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರೈತರು ಕುಡಿದು ಸತ್ತರು ಎಂದು ಹೇಳಿಕೆ ನೀಡಿ ರೈತರಿಗೆ ಅವಮಾನ ಮಾಡಿದ್ದರು. ಸಿದ್ದರಾಮಯ್ಯನವರೇ, ಇದೇನಾ ನಿಮ್ಮ ಆತ್ಮಸಾಕ್ಷಿ ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ.