ಬೆಂಗಳೂರು: ರಾಜ್ಯದಲ್ಲಿ ಇಂದು 52 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 341ಕ್ಕೆ ಇಳಿದಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 12 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ, ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಅಲ್ಲದೇ, ಇಂದು ಸೋಂಕಿನಿಂದ 60 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕಿತರಲ್ಲಿ 312 ಜನರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರೆ, 25 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.