ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಚಿನ್ನದ ಹುಡುಗ ನೀರಜ್’ ಗೆ ಹರಿದುಬಂದ ಬಹುಮಾನ ಮೊತ್ತ ಎಷ್ಟು ಗೊತ್ತಾ..?

Mahesh M Dhandu by Mahesh M Dhandu
August 8, 2021
in Newsbeat, Sports, ಕ್ರೀಡೆ
Neeraj chopra saaksha tv
Share on FacebookShare on TwitterShare on WhatsappShare on Telegram

`ಚಿನ್ನದ ಹುಡುಗ ನೀರಜ್’ ಗೆ ಹರಿದುಬಂದ ಬಹುಮಾನ ಮೊತ್ತ ಎಷ್ಟು ಗೊತ್ತಾ..?

ಬೆಂಗಳೂರು : ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತಂದಿರುವ ಚಿನ್ನದ ಹುಡುಗ ನೀರಜ್ ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇದರ ಜೊತೆಗೆ ಬಹುಮಾನಗಳ ಸುರಿಮಳೆಯೂ ನಡೆಯುತ್ತಿದೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ 87.58 ಮೀಟರ್ ಎಸೆದು ಇತಿಹಾಸ ಸೃಷ್ಟಿಸಿದರು. ಈ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

ಬಹುಮಾನ ಮೊತ್ತ ಎಷ್ಟು ಗೊತ್ತಾ..?
ಭಾರತದ ಐತಿಹಾಸಿಕ ಸಾಧನೆ ಮಾಡಿದ ನೀರಜ್ ಚೋಪ್ರಾ ಅವರಿಗೆ ಮೊದಲು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ 6 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ. ಜೊತೆಗೆ ಕ್ಲಾಸ್-1 ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಕೋಟಿ ರೂ. ಬಹುಮಾನ ಘೋಷಿಸಿದೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ 2 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

Neeraj chopra saaksha tv

ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್‍ನ ತಂಡ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯೂ 1 ಕೋಟಿ ರೂ. ಬಹುಮಾನ ನೀಡುವುದಾಗಿ ಟ್ವೀಟ್ ಮಾಡಿದೆ.

ನೀರಜ್ ಸಾಧನೆಗೆ ಮೆಚ್ಚಿ ವಿಮಾನಯಾನ ಸಂಸ್ಥೆ ಇಂಡಿಗೋ ಭಾರತದ ಯಾವುದೇ ಸ್ಥಳಕ್ಕೆ ಪ್ರಯಾಣಿಸಲು ನೀರಜ್ ಗೆ ಒಂದು ವರ್ಷಗಳ ಕಾಲ ಉಚಿತ ಸೇವೆ ನೀಡುವುದಾಗಿ ತಿಳಿಸಿದೆ.

ಸದಾ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಭಾರತದ ಜನಪ್ರಿಯ ಕಾರು ತಯಾರಿಕಾ ಮಹಿಂದ್ರಾ ಸಂಸ್ಥೆಯ ಮುಖ್ಯಸ್ಥರಾದ ಆನಂದ್ ಮಹಿಂದ್ರಾ ಅವರು ನೂತನ ಎಕ್ಸ್‍ಯುವಿ 700 ಐಶಾರಾಮಿ ಕಾರನ್ನು ನೀರಜ್‍ಗೆ ಉಡುಗೊರೆಯಾಗಿ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಒಡಿಶಾ ಸರಕಾರ 1 ಕೋಟಿ ರೂ. ಮಣಿಪುರ ಸರಕಾರ ಕೂಡ 1 ಕೋಟಿ ರೂ. ಘೋಷಿಸಿದೆ. ಇತ್ತ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಜೀವಿತಾವಧಿವರೆಗೆ ದೇಶದ ಯಾವುದೇ ಸ್ಥಳದಿಂದ ನಿಗಮದ ಎಲ್ಲಾ ಬಸ್‍ನಿಂದಲೂ ಉಚಿತವಾಗಿ ಪ್ರಯಾಣಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೇಳಿದೆ. ಇಲ್ಲದೆ ರಿಯಾಲಿಟಿ ಸಂಸ್ಥೆ ಎಲಾನ್ ಗ್ರೂಪ್‍ನ ಮುಖ್ಯಸ್ಥ ರಾಕೇಶ್ ಕಪೂರ್ ಕೂಡ 25 ಲಕ್ಷ ರೂ.ಗಳ ಬಹುಮಾನ ನೀಡಲು ಮುಂದಾಗಿದ್ದಾರೆ.

ಹೀಗೆ ನೀರಜ್ ಅವರಿಗೆ ಬಹುಮಾನಗಳ ಮಹಾಪೂರವೇ ಹರಿದುಬರುತ್ತಿದ್ದು, ಈವರೆಗೂ ಅವರಿಗೆ ಒಟ್ಟಾರೆ 12 ಕೋಟಿ 25 ಲಕ್ಷ ರೂ. ಬಹುಮಾನ ಮೊತ್ತ ಹರಿದು ಬಂದಿದೆ ಎಂದು ತಿಳಿದುಬಂದಿದೆ.

Tags: #Saaksha TVindiaNeeraj ChopraTokyo Olympics
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram