ಇತ್ತೀಚೆಗೆ ಪೌರಾಣಿಕ ಕತೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯಾಗುತ್ತಿದ್ದಂತೆ ರಾಮಾಯಣದ ಚಿತ್ರಗಳಿಗೆ ಇನ್ನಿಲ್ಲದ ಬೇಡಿಕೆ. ಈಗಾಗಲೇ ಹಲವು ಚಿತ್ರಗಳು ಬಂದಿದ್ದು, ಬಾಲಿವುಡ್ ಅಂಗಳದಲ್ಲಿ ಮತ್ತೊಂದು ಅದೇ ರೀತಿಯ ಚಿತ್ರ ಸದ್ದು ಮಾಡುತ್ತಿದೆ. ಈಗ ಅದರ ಖರ್ಚಿನ ಬಗ್ಗೆ ಸುದ್ದಿ ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.
ಈ ರಾಮಾಯಣ ಚಿತ್ರ ಮೂರು ಪಾರ್ಟ್ ನಲ್ಲಿ ಮೂಡಿ ಬರುತ್ತಿದೆ. ಚಿತ್ರ ತಂಡ ಈ ಕುರಿತು ಹೇಳದಿದ್ದರೂ ಕಲಾವಿದರ ಸಂಭಾವನೆಯ ಕುರಿತು ಭಾರೀ ಚರ್ಚೆಯಾಗುತ್ತಿದೆ. ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿದಂತೆ ಅವರಿಗೆ 225 ಕೋಟಿ ರೂ. ಸಂದಾಯವಾಗಲಿದೆ. ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಯಶ್ ಮೂರೂ ಪಾರ್ಟ್ ಸೇರಿ 150 ಕೋಟಿ ರೂ, ನಟಿ ಸಾಯಿ ಪಲ್ಲವಿ 18 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಕೇಳಿ ಅಭಿಮಾನಿಗಳು ಹಾಗೂ ಸಿನಿ ರಸಿಕರು ಶಾಕ್ ಆಗುತ್ತಿದ್ದಾರೆ.
ರಾಮನ ಪಾತ್ರಕ್ಕಾಗಿ ರಣಬೀರ್ ಹಳ್ಳಿಯಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ನಿತೀಶ್ ತಿವಾರಿ ಈ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಈ ಚಿತ್ರ ಆದಿಪುರುಷ್ ರೀತಿ ಜನರ ಆಕ್ರೋಶಕ್ಕೆ ಕಾರಣವಾಗಬಾರದು ಎಂಬ ಕಾರಣದಿಂದ ಅವರು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದಾರೆ.
ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್ ಆಗಿರಬೇಕು. ಅಲ್ಲದೇ ಗೆಟಪ್ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್ ಕಪೂರ್ ತಮ್ಮ ಟ್ರೇನರ್ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.