ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಮ ಹೇಗಿರುತ್ತಾನೆ ಎಂದು ಈಗ ಭಾರತೀಯರು ಚರ್ಚಿಸುತ್ತಿದ್ದಾರೆ. ಹಾಗಾದರೆ ರಾಮ ಹೇಗಿರುತ್ತಾನೆ? ಈ ಸ್ಟೋರಿ ಓದಿ….
ರಾಮನ ವಿಗ್ರಹವು 51 ಇಂಚು ಎತ್ತರ ಇರಲಿದ್ದು, ಬರೋಬ್ಬರಿ 1.5 ಟನ್ ತೂಕ ಹೊಂದಿರಲಿದೆ ಎಂದು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ 4 ದಿನ ಮುನ್ನ ಅಂದರೆ ಜ.18 ರಂದೇ ಗರ್ಭಗುಡಿಗೆ ಶ್ರೀರಾಮನ ಪ್ರವೇಶ ಆಗಲಿದೆ. ರಾಮನ ಕಪ್ಪು ಬಣ್ಣದ ವಿಗ್ರಹವು 51 ಇಂಚು ಎತ್ತರ, 1.5 ಟನ್ ತೂಕ ಹೊಂದಿರಲಿದೆ. ದೆ. ಮುಖ 5 ವರ್ಷದ ಮಗುವಿನಷ್ಟೇ ಮುಗ್ಧತೆ ಹೊಂದಿರುತ್ತದೆ. ಪ್ರತಿ ವರ್ಷ ರಾಮ ನವಮಿ ಚೈತ್ರ ಮಾಸದ ಶುಕ್ಲ ಪಕ್ಷದ 9ನೇ ತಾರೀಖಿನಂದು ಮಧ್ಯಾಹ್ನ 12 ಗಂಟೆಗೆ ಸೂರ್ಯ ಸ್ವತಃ ತನ್ನ ಕಿರಣಗಳ ಮೂಲಕ ಶ್ರೀರಾಮನ ಹಣೆ ಸ್ಪರ್ಶ ಮಾಡಲಿದ್ದಾನೆ ಎಂದು ಹೇಳಿದ್ದಾರೆ.
ಜ.16 ರಿಂದ ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳು ಪ್ರಾರಂಭವಾಗಲಿವೆ. ಜ.18 ರಂದು ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪಿಸಲಾಗುವುದು ಎಂದು ಹೇಳಿದ್ದಾರೆ. ಮುಖದ ಮೃದುತ್ವ, ಕಣ್ಣುಗಳಲ್ಲಿನ ನೋಟ, ನಗು, ದೇಹ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಕಪ್ಪು ಶಿಲೆಯ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ. ತಲೆ, ಕಿರೀಟವನ್ನು ಕೂಡ ಉತ್ತಮವಾಗಿ ಕೆತ್ತಲಾಗಿದೆ ಎಂದು ಹೇಳಿದ್ದಾರೆ.








