ಮೈಸೂರು: ನರೇಂದ್ರ ಮೋದಿ 3.0 ಸರ್ಕಾರಕ್ಕೆ ಇಂದಿಗೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಭ್ರಮಾಚರಣೆ ನಡೆಸುತ್ತಿದೆ. ಈ ವೇಳೆ ಮೋದಿ (Narendra Modi) ಸರ್ಕಾರದ ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಹತ್ತರಲ್ಲಿ ಸೊನ್ನೆ ಅಂಕ ನೀಡುವುದಾಗಿ ಹೇಳಿದ್ದಾರೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಎಂದು ಪ್ರಶ್ನಿಸಿದ್ದಾರೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದಿದ್ದರು, ಉದ್ಯೋಗ ಕೊಟ್ಟರಾ ಎಂದು ಪ್ರಶ್ನಿಸಿದರು.
ಮೋದಿ ಬರೀ ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ.. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ಸಿಗುತ್ತಿದೆ ಎಂದು ಗುಡುಗಿದ್ದಾರೆ.