ಇಂದಿನಿಂದ ಮೂರು ದಿನಗಳವರೆಗೆ ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಜೊತೆಗೆ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಉತ್ತರ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಹೇಳಿದೆ
ಏಪ್ರಿಲ್ 11 ರಂದು ದಾವಣಗರೆ ಮತ್ತು ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 42.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುತ್ತದೆ. ಇನ್ನು ರಾಯಚೂರು ಜಿಲ್ಲೆಯ 17 ಕ್ಕೂ ಹೆಚ್ಚು ಪ್ರದೇಶಗಳಲ್ಲಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಒಂದು ಪ್ರದೇಶದಲ್ಲಿ, ಯಾದಗಿರಿ ಜಿಲ್ಲೆಯ 8 ಸ್ಥಳಗಳಲ್ಲಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು, ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಯಾವುದೇ ಬದಲಾವಣೆಯಿಲ್ಲವೆಂದು ಹವಾಮಾನ ಇಲಾಖೆ ತಿಳಿಸಿದೆ.
![{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"441845485021211","type":"ugc"},{"id":"289170894054211","type":"ugc"}]}}](https://saakshatv.com/wp-content/uploads/2025/04/Picsart_25-04-12_20-44-34-717-750x500.jpg)







