ಬೆಂಗಳೂರು : ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ (JDS) ತನ್ನ 2ನೇ ಪಟ್ಟಿಯನ್ನು ಬುಧವಾರ ಅಥವಾ ಗುರುವಾರ ಬಿಡುಗಡೆ ಮಾಡಬಹುದು. ಈ ಕುರಿತು ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಬುಧವಾರ ಸಂಜೆ ದೆಹಲಿಯಿಂದ ಮರಳಲಿದ್ದಾರೆ. ಆ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು.
ನನಗಿಂತ ನಿಮಗೆ ಹಾಸನ (Hassana) ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ ಎಂದು ಹೇಳಿದ್ದಾರೆ. 2ನೇ ಪಟ್ಟಿಯಲ್ಲಿ ಹಾಸನ ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನದ್ದೂ ಒಳಗೊಂಡಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
2ನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಶೇ.2-3 ರಷ್ಟು ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ ಎಂದು ಹೇಳಿದ್ದಾರೆ.








