ಕೆಲಸದ ಒತ್ತಡದಿಂದಾಗಿ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದ ಹಿನ್ನೆಲೆ ಕಳೆದ 3ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರೂ ಕೊನೆಗೂ ಮುಷ್ಕರ ಕೈಬಿಟ್ಟಿದ್ದು, ನಾಳೆಯಿಂದ ಕೆಲಸಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.
ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ವೈದ್ಯ ಸಂಘದ ಮಾಜಿ ಅಧ್ಯಕ್ಷ ಡಾ. ರವೀಂದ್ರ ಹೇಳಿದ್ದರು.
ಇದೀಗ ಸಾಮಾನ್ಯ ಜನರಿಗೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಮುಷ್ಕರಕ್ಕೆ ಅಂತ್ಯ ಹಾಡಿದ್ದು, ಕರ್ತವ್ಯಕ್ಕೆ ಹಾಜರಾಗಲು ಸಜ್ಜಾಗಿದ್ದಾರೆ. ಮತ್ತೊಂದೆಡೆ ಕಳೆದ ಮೂರು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸಿದ್ರೂ ಸಹ ಮೃತ ಡಾ.ನಾಗೇಂದ್ರ ಅವರ ಕುಟುಂಬಸ್ಥರು ಪ್ರತಿಭಟನೆಗೆ ಸಾಥ್ ನೀಡದೆ ತಟಸ್ಥವಾಗಿದ್ದರು.