ನೂತನ ಶಸ್ತ್ರ ಚಿಕಿತ್ಸಾ ನೀತಿಯನ್ನು ವಿರೋಧಿಸಿ ನಾಳೆ ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆ ಸರ್ಕಾರಿ ವೈದ್ಯರ ರಜೆ ರದ್ದು
ಬೆಂಗಳೂರು, ಡಿಸೆಂಬರ್10: ಡಿಸೆಂಬರ್ 11 2020 ಶುಕ್ರವಾರದಂದು ಭಾರತೀಯ ವೈದ್ಯ ಸಂಘವು, ನೂತನ ಶಸ್ತ್ರ ಚಿಕಿತ್ಸಾ ನೀತಿಯನ್ನು ವಿರೋಧಿಸಿ, ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರ ರಜೆ ರದ್ದುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಭಾರತೀಯ ವೈದ್ಯ ಸಂಘವು, ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿ ಅಧಿಸೂಚನೆಯನ್ನ ಹಿಂಪಡೆಯುವಂತೆ ಆಗ್ರಹಿಸಿ, ನಾಳೆ ಬೆಳಿಗ್ಗೆ ತುರ್ತು ಹಾಗೂ ಕೋವಿಡ್-19 ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಕರೆ ಕೊಟ್ಟಿವೆ.
ಹಿಂದೂ, ಕ್ರಿಶ್ಚಿಯನ್ ಮಹಿಳೆಯರನ್ನು ಬಲವಂತವಾಗಿ ಮದುವೆ ಮಾಡಿಸಿ ಚೀನಾಕ್ಕೆ ಮಾರಾಟ ಮಾಡುತ್ತಿರುವ ಪಾಕಿಸ್ತಾನ
ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವ್ಯತ್ಯಾಸವಾಗದಂತೆ ನೋಡಿಕೊಳ್ಳಲು ವೈದ್ಯರ ರಜೆಯನ್ನು ರದ್ದುಪಡಿಸಿ, ಆದೇಶ ಹೊರಡಿಸಿದ್ದಾರೆ.
ಭಾರತೀಯ ವೈದ್ಯ ಸಂಘವು ಸಿಸಿಐಎಂ ಶಲ್ಯ ಮತ್ತು ಶಲ್ಯಕ ವಿಷಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿರುವ ಆಯುಷ್ ವೈದ್ಯರು 39 ಸಾಮಾನ್ಯ ಹಾಗೂ 19 ಕಿವಿ, ಮೂಗು, ಗಂಟಲು, ಕಣ್ಣು, ಶಿರ ಮತ್ತು ದಂತ ವೈದ್ಯ ಸೇವೆಗಳ ಶಸ್ತ್ರ ಚಿಕಿತ್ಸೆಗಳನ್ನು ನಿರ್ವಹಿಸಬಹುದೆಂದು ಅಧಿಸೂಚಿಸಿರುವ ಮೇರೆಗೆ ಅದನ್ನು ವಿರೋಧಿಸಿ ಭಾರತೀಯ ವೈದ್ಯ ಸಂಘವು ಕರ್ನಾಟಕ ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಂಡಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತುರ್ತು ಹಾಗೂ ಕೋವಿಡ್-19 ಸೇವೆಗಳನ್ನು ಹೊರತು ಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲು ವೈದ್ಯರಿಗೆ ಕರೆ ನೀಡಿರುತ್ತಾರೆ.

ಆದುದ್ದರಿಂದ ನಿಮ್ಮ ಅಧೀನದಲ್ಲಿನ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಸೇರಿದಂತೆ ಎಲ್ಲಾ ಸೇವೆಗಳು ಯಾವುದೇ ವ್ಯತ್ಯಾಯವಿಲ್ಲದಂತೆ ಎಂದಿನಂತೆ ಕಾರ್ಯನಿರ್ವಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಮುಷ್ಕರದ ಅವಧಿಯಲ್ಲಿ ವೈದ್ಯರಿಗೆ ಯಾವುದೇ ರಜೆಯನ್ನು ಮಂಜೂರು ಮಾಡದಿರಲು ಈ ಮೂಲಕ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಆಯುಷ್ ವೈದ್ಯರಿಗೆ ಇನ್ನು ಮುಂದೆ ಶಸ್ತ್ರಚಿಕಿತ್ಸೆ ತರಬೇತಿ ನೀಡಲಾಗುತ್ತದೆ. ಇದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದ್ದು, ಆಲೋಪತಿ ವೈದ್ಯರು ಮತ್ತು ವಿವಿಧ ಖಾಸಗಿ ಕ್ಲಿನಿಕ್ಗಳ ವೈದ್ಯರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಚಳಿಗಾಲದಲ್ಲಿ ಅಗತ್ಯವಾಗಿ ಸೇವಿಸಬೇಕಾದ ಸೂಪರ್‌ಫುಡ್‌ಗಳುhttps://t.co/0cgV3uCy8H
— Saaksha TV (@SaakshaTv) December 9, 2020
ಚೀನಾದಿಂದ ಡಿಜಿಟಲ್ ಸ್ಟ್ರೈಕ್ ; ಪ್ರಮುಖ ದೇಶಗಳ ಜನಪ್ರಿಯ 105 ಆಯಪ್ ಬ್ಯಾನ್https://t.co/FBGew6I7vG
— Saaksha TV (@SaakshaTv) December 9, 2020







