ನವದೆಹಲಿ: ನಾನು ರಾಜಕೀಯ ರಂಗ ಪ್ರವೇಶಿಸಿದ ದಿನದಿಂದಲೂ ಟೀಕೆ ಮಾಡುವವರು ಇದ್ದಾರೆ. ನಾನು ಅವುಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ನನ್ನ ಜೀವ ಇರುವವರೆಗೂ ರಾಜಕೀಯ ಮಾಡುತ್ತಿರುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ನನ್ನ ರಾಜ್ಯಸಭೆಯ ಅವಧಿ ಈಗಾಗಲೇ 18 ತಿಂಗಳು ಕಳೆದಿವೆ. ನನ್ನ ಆರೋಗ್ಯ ಹಾಗೂ ಜೀವ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ನನಗೆ ಆಗಲೂ ವಿರೋಧಿಗಳಿದ್ದರು. ಈಗಲೂ ವಿರೋಧಿಗಳಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದನ್ನು ಎದುರಿಸುವ ಸಾಮರ್ಥ್ಯ ಜೆಡಿಎಸ್‌ಗೆ ಇದೆ ಇಂದೂ ಎದುರಿಸುತ್ತೇವೆ.
ನಾಳೆಯೂ ಎದುರಿಸುತ್ತೇವೆ. ಸಮಾವೇಶದಿಂದ ಯಾವ ಲಾಭವೂ ಇಲ್ಲ. ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸೋತರೂ ಅವರ ನಾಯಕತ್ವ ಮುಂದೆ ಬೆಳೆಯುತ್ತೆ, ಅವರಿಗೆ ಶಕ್ತಿ ಕೊಡಲು ಪಕ್ಷ ನಿರ್ಣಯ ಮಾಡಲಾಗಿದೆ. ಸೋಲಿನಿಂದ ಧೃತಿಗೆಟ್ಟಿಲ್ಲ, ಹೋರಾಟ ಮಾಡುವ ಕೆಚ್ಚೆದೆ ಇದೆ. ಸೋಲನ್ನು ಸಮತಲದಲ್ಲಿ ತೆಗೆದುಕೊಂಡಿದ್ದೇವೆ. ಇವತ್ತು ಜನರು ಸೋಲಿಸಿದ್ದಾರೆ, ನಾಳೆ ಗೆಲ್ಲಿಸುತ್ತಾರೆ ಎಂದಿದ್ದಾರೆ.








