ನನಗೇನು ಆಗಿಲ್ಲ, ನಾನು ಆರೋಗ್ಯವಾಗಿದ್ದೀನಿ : ದೊಡ್ಡಣ್ಣ
ಬೆಂಗಳೂರು : ಚಂದನವನದ ಹಿರಿಯ ನಟ ದೊಡ್ಡಣ್ಣ ಅವರ ಕುರಿತು ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಮಾತನಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ, ಕೊರೊನಾ ವಿಚಾರವಾಗಿ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನನ್ನ ಫೆÇೀಟೋ ಹಾಕಿಕೊಂಡು ನಾನು ಕೊರೊನಾದಿಂದ ಮರಣ ಹೊಂದಿದ್ದೇನೆ ಎಂದು ಸಾಮಾಜಿಕ ಜಾಲತಾನದಲ್ಲಿ ಸುಳ್ಳು ಸುದ್ದಿ ಹರಿದಾಡಿದೆ ನಾನು ಚೆನ್ನಾಗಿ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನನಗೆ ಬೆಳಗ್ಗೆಯಿಂದ ಹಲವು ಕರೆಗಳು ಬರುತ್ತಿದೆ, ನಾನು ಮನೆಯಲ್ಲೇ ಇದ್ದೇನೆ ಆರೋಗ್ಯವಾಗಿದ್ದೇನೆ. ಯಾರು ಭಯ ಪಡಬೇಡಿ ಕನ್ನಡ ನಾಡಿನ ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿರುವವರೆಗೆ ನನಗೆ ಏನು ಆಗುವುದಿಲ್ಲ. ನನ್ನ ಆಯುಷ್ಯ ಹೆಚ್ಚಾಗಿದೆ ನನಗೆ ಬರಲು ಇದ್ದ ಕಂಟಕ ಈ ಮೂಲಕ ಬಗೆಹರಿದಿದೆ ಎಂದು ನಾನು ತಿಳಿದುಕೊಳ್ಳುತ್ತೇನೆ ಎಂದು ದೊಡ್ಡಣ್ಣ ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.