ಬೆಂಗಳೂರು: ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೊನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಆರೋಗ್ಯ ಸಚಿವ ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ. ಕೊರೊನಾ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಅಂತಾ ಮುಖ್ಯಮಂತ್ರಿಗಳು ಹೇಳಲಿ, ನೋಡೋಣ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ? ಅದರಲ್ಲಿ ಭಾಗಿಯಾಗಬೇಕಾ? ಬಿಜೆಪಿಯವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂದು ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
`ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕಫ್ರ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’
`ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೊನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ ಎಂದು ಡಿಕೆಶಿ ತಿಳಿಸಿದರು.
ಸರ್ಕಾರ ಅವರ ಖಾಸಗಿ ಆಸ್ತಿನಾ..!
`ನೀವು ಕೊರೊನಾ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದಾದರೂ ಸಲಹೆ ಪಡೆದಿದ್ದಾರಾ? ಆರೋಗ್ಯ ಸಚಿವ ಸುಧಾಕರ್ ಹಾಗೂ ಸಿಎಂ ಯಡಿಯೂರಪ್ಪ ಅವರನ್ನು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








