ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಲ್ಲಿ ಯಾವುದೇ ಬದಲಾವಣೆ ಇಲ್ಲ. ಸರ್ಕಾರ ಗ್ಯಾರಂಟಿ ಬಂದ್ ಮಾಡುವುದಿಲ್ಲ. ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂಬ ವದಂತಿ ಹಬ್ಬಿದೆ. ಆದರೆ, ಅದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವುದು ಶುದ್ಧ ಸುಳ್ಳು. ಎಲ್ಲ ಶಾಸಕರಿಗೂ ಅಭಿವೃದ್ಧಿಗಾಗಿ ಹಣ ನೀಡಿದ್ದೇವೆ ಎಂದು ಹೇಳಿದ್ದಾರೆ.