ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ  ಸಮುದಾಯ ಸೇರಿಲ್ಲವೇ?

1 min read
siddaramaiah

ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ  ಸಮುದಾಯ ಸೇರಿಲ್ಲವೇ? siddramaiah saaksha tv

ಬೆಂಗಳೂರು : ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಮುಖ್ಯಮಂತ್ರಿ  ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು.

ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ  ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟೀಕಿಸಿದ್ದಾರೆ.

siddramaiah saaksha tv

ಹಿಂದುಗಳ ರಕ್ಷಣೆಗಾಗಿಯೇ  ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?

ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ.

ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd