ಬೆಂಗಳೂರು: ನಾಯಿ ವಿಚಾರಕ್ಕೆ ಮಹಿಳೆಯ ಮೇಲೆ ಫ್ಲಾಟ್ ಮಾಲೀಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಜೀವನ್ ಭೀಮಾ ನಗರದಲ್ಲಿ ಈ ಘಟನೆ ನಡೆದಿದೆ. ನಾಯಿ ಸಾಕಬಾರದು ಎಂದು ಮಾಲೀಕರು ಬಾಡಿಗೆದಾರರಿಗೆ ಸೂಚಿಸಿದ್ದಾರೆ. ಆದರೆ, ಇದಕ್ಕೆ ಬಾಡಿಗೆದಾರರು ಒಪ್ಪಿಲ್ಲ. ಹೀಗಾಗಿ ಗಲಾಟೆ ನಡೆದಿದ್ದು, ತಡರಾತ್ರಿ ಅಪಾರ್ಟ್ಮೆಂಟ್ನ ಫ್ಲಾಟ್ಗೆ ನುಗ್ಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಫ್ಲಾಟ್ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಮಹಿಳೆ ಆರೋಪಿಸಿ, ದೂರು ನೀಡಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.








