ಬೆಂಗಳೂರು : ಬೆಳಗಾವಿ ಸಾಹುಕಾರ್ – ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇದೇ 24 ರಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಡಿಕೆಶಿ ಸಚಿವ ರಮೇಶ್ ಜಾರಕಿಹೊಳಿ ಅವರ ಕ್ಷೇತ್ರ ಗೋಕಾಕನ್ನೇ ಪ್ರವಾಹ ವೀಕ್ಷಣೆಗೆ ಆಯ್ದುಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಜಿಲ್ಲೆಯ ಖಾನಾಪುರ, ರಾಮದುರ್ಗ, ಸವದತ್ತಿ ಹಾಗೂ ಚಿಕ್ಕೋಡಿ, ಅಥಣಿ ಭಾಗಗಳು ಕೂಡ ಪ್ರವಾಹದಿಂದ ಅತಿಹೆಚ್ಚು ಹಾನಿಯಾಗಿವೆ. ಆದರೂ ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿವಕುಮಾರ್ ಪ್ರವಾಸ ಮಾಡುತ್ತಿದ್ದಾರೆ. ಇದು ಚರ್ಚೆ ಗ್ರಾಸವಾಗಿದ್ದು, ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಲು ಟ್ರಬಲ್ ಶೂಟರ್ ಈ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.