ಬೆಂಗಳೂರು: ಕೊಪ್ಪಳದಲ್ಲಿ 5 ಸಾವಿರ ಕೋಟಿ ವೆಚ್ಚದಲ್ಲಿ ಆಟಿಕೆ ಕ್ಲಸ್ಟರ್ ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಆದರೆ, ಇದು 2018ರ ಮೈತ್ರಿ ಸರ್ಕಾರದ ಅವಧಿಯ ಯೋಜನೆಯಾಗಿದೆ. ಹಾಗಿದ್ದರೂ ಬಿಜೆಪಿ ಸರ್ಕಾರ ವಾಸ್ತವವನ್ನು ಮರೆಮಾಚುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2018ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಕನಸಿನ ಕೂಸಾಗಿದ್ದ `ಕಾಂಪಿಟ್ ವಿತ್ ಚೀನಾ’ ಪರಿಕಲ್ಪನೆಯಡಿ ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲು 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು ಎಂದು ನಿಖಿಲ್ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ #ವೋಕಲ್ ಫಾರ್ ಲೋಕಲ್ಗೆ ಬಲ ನೀಡಲು ಭಾರತದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರನ್ನು ಕೊಪ್ಪಳದಲ್ಲಿ ಆರಂಭಿಸುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೊಂಡಿದ್ದಾರೆ. ಭಾರತವನ್ನು ಆಟಿಕೆ ಉತ್ಪಾದನೆಯ ಕೇಂದ್ರ ಬಿಂದುವನ್ನಾಗಿ ಮಾಡಲು ನೀಡಿದ್ದ ಕರೆಗೆ ಓಗೊಟ್ಟು ಮಾಡಿರುವ ಕೆಲಸವೆಂಬಂತೆ ಪ್ರಧಾನಿಗಳು ಇದನ್ನು ಹೇಳಿಕೊಂಡಿದ್ದಾರೆ.
2019ರಲ್ಲಿ 2000 ಕೋಟಿ ರೂ. ಅನುದಾನ ಒದಗಿಸಲು ನಿರ್ಧರಿಸಲಾಗಿತ್ತು. ಉತ್ಪಾದನಾ ವಲಯವನ್ನು ಉತ್ತೇಜಿಸಲು ಸ್ಥಳೀಯ ಸಂಪನ್ಮೂಲಗಳ ಬಳಕೆ, 9 ಜಿಲ್ಲೆಗಳಲ್ಲಿ ಕನಿಷ್ಠ 9 ಲಕ್ಷ ಸ್ಥಳೀಯರಿಗೆ ಉದ್ಯೋಗವಕಾಶ ಮತ್ತು ಅಸಮತೋಲನ ನಿವಾರಿಸುವ ಸಲುವಾಗಿ ಈ ಯೋಜನೆ ಜಾರಿ ಮಾಡಲಾಗಿತ್ತು ಎಂದು ನಿಖಿಲ್ ವಿವರಿಸಿದ್ದಾರೆ.
ಕೊಪ್ಪಳದಲ್ಲಿ ಆಟಿಕೆ, ಕಲಬುರಗಿಯಲ್ಲಿ ಸೋಲಾರ್ ವಿದ್ಯುತ್ ಉಪಕರಣ, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಬಿಡಿ ಭಾಗಗಳ ತಯಾರಿಕೆ, ತುಮಕೂರಿನಲ್ಲಿ ಸ್ಪೋಟ್ಸ್ ಮತ್ತು ಫಿಟ್ನೆಸ್ ಉಪಕರಣ ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಮೈತ್ರಿ ಸರ್ಕಾರ ಮುಂದಾಗಿತ್ತು ಎಂದಿದ್ದಾರೆ ನಿಖಿಲ್.
***
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.