ಕೊರೋನಾ ವೈರಸ್ ಸೋಂಕಿನ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ ಗೆ ಉದಾರವಾಗಿ ದೇಣಿಗೆ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಸಹೃದಯಿ ನಾಗರಿಕರಲ್ಲಿ ಮನವಿ ಕೊರೊನಾ ಸೋಂಕಿನ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಸಹೃದಯಿ ನಾಗರಿಕರು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ ಗೆ ಉದಾರವಾಗಿ ದೇಣಿಗೆ ನೀಡುವ ಮೂಲಕ ಭಾಗಿಗಳಾಗಲು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.
ಕರ್ನಾಟಕ ಕೊರೊನಾ ವೈರಸ್ ಸೋಂಕು ವಿರುದ್ಧ ಸಮರವನ್ನು ಸಾರಿದೆ. ಈ ಕಷ್ಟಕರ ಪರಿಸ್ಥಿತಿಯ ಸಂದರ್ಭದಲ್ಲಿ ಕೊರೊನಾ ನಿಧಿಗಾಗಿ ನೀವು ಕೊಡುಗೆ ನೀಡಿ ರಾಜ್ಯಕ್ಕೆ ಸಹಾಯ ಮಾಡಿ ಎಂದು ನಾನು ಈ ಮೂಲಕ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆ ವಿವರ
ಖಾತೆಯ ಹೆಸರು: Chief Minister Relief Fund Covid-19
ಬ್ಯಾಂಕ್ ಹೆಸರು: SBI (State Bank oF India)
ಶಾಖೆ: Vidhana soudha Branch
ಖಾತೆ ಸಂಖ್ಯೆ; 39234923151,
ಐಎಫ್ ಎಸ್ ಸಿ ಕೋಡ್: SBIN0040277,
ಎಂಐಸಿಆರ್ ಸಂಖ್ಯೆ 560002419,
ಚೆಕ್ ಮತ್ತು ಡಿಡಿ ಕಳುಹಿಸಬೇಕಾದ ವಿಳಾಸ: ನಂ.235-ಎ, 2ನೆ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು-560001
ಈ ರೀತಿ ಸಲ್ಲಿಸುವ ದೇಣಿಗೆಗೆ, ಆದಾಯ ತೆರಿಗೆ ಕಾಯ್ದೆ 80 ಜಿ(2)ರಡಿ ತೆರಿಗೆ ವಿನಾಯಿತಿ ಇದೆ. ಆದಾಯ ತೆರಿಗೆ ವಿನಾಯಿತಿ ಪಡೆಯಲು PAN NO.AAAGC1692P ಅಥವಾ GGGGG0000G ಅನ್ನು ಬಳಸಬಹುದು ಎಂದು ಮುಖ್ಯಮಂತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ








