ಮದುವೆಗೆ ಬರಬೇಡಿ ಎಂದ ವಧು ಮನವಿ Saaksha Tv
ಚಾಮರಾಜನಗರ: ಇಂದು ಮತ್ತು ನಾಳೆ ನಡೆಯಲಿರುವ ಮದುವೆಗೆ, ಮದುಮಗಳು ಒಬ್ಬರು ಮದುವೆಗೆ ಬರಬೇಡಿ ಎಂದು ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಚಾಮರಾಜನಗರ ತಾಲೂಕಿನ ವಿ.ಸಿ. ಹೊಸೂರು ಗ್ರಾಮದ ಸುಶ್ಮಾ ಹಾಗೂ ಚನ್ನಪ್ಪನಪುರದ ಶ್ರೇಯಸ್ ನಡುವೆ ಮದುವೆ ನಿಶ್ಚಯವಾಗಿತ್ತು. ಈಗಾಗಲೇ ಕುಟುಂಬಸ್ಥರು ಮದುವೆ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಹಂಚಿದ್ದರು. ಚಾಮರಾಜನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆ ನೆರವೇರಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು.
ಆದರೆ ಕೊರೊನಾ ಕಾರಣದಿಂದ ಇದೀಗ ಮನೆಯಲ್ಲಿಯೇ ಸರಳವಾಗಿ ವಿವಾಹ ಮಾಡಿಕೊಳ್ಳಲು ವಧು-ವರ ಸೇರಿದಂತೆ ಎರಡೂ ಕಡೆಯ ಕುಟುಂಬಸ್ಥರೆಲ್ಲಾ ನಿರ್ಧಾರ ತೆಗೆದುಕೊಂಡಿದ್ದು, ಮದುವೆಯು ವಧುವಿನ ಸ್ವಗೃಹದಲ್ಲೆ ಸರಳವಾಗಿ ನಡೆಯುತ್ತಿದೆ. ಹೀಗಾಗಿ ಮದುಮಗಳು ಮದುವೆ ಕಾರ್ಯಕ್ರಮಕ್ಕೆ ಬಾರದೆ, ಇದ್ದಲ್ಲಿಯೇ ಆಶೀರ್ವದಿಸಿ ಎಂದು ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ.