ರಾಜಕೀಯ ಮಾಡಬೇಡಿ, ವಾಸ್ತವಾಂಶ ತಿಳಿಯಿರಿ : ಡಾ.ಕೆ.ಸುಧಾಕರ್

1 min read
K. Sudhakar

ರಾಜಕೀಯ ಮಾಡಬೇಡಿ, ವಾಸ್ತವಾಂಶ ತಿಳಿಯಿರಿ : ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಫೋಟ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸಚಿವರು ಟ್ವೀಟ್ ಮಾಡಿದ್ದಾರೆ. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ನಿಯಮಬಾಹಿರವಾಗಿ ಜಿಲೆಟಿನ್ ಸಂಗ್ರಹಿಸುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ವೇಳೆ, ಅದನ್ನು ಬೇರೆಡೆ ಸಾಗಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಕೆಲ ನಾಯಕರು ಈ ವಾಸ್ತವಾಂಶ ಅರಿಯದೆ ಇಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

K. Sudhakar

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲೆಟಿನ್ ಅನ್ನು ನಿಯಮ ಪ್ರಕಾರ ಶೇಖರಣೆ ಮಾಡಬೇಕು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಶೇಖರಿಸಿದ್ದು, ಅದನ್ನು ವಿಲೇವಾರಿ ಮಾಡುವಾಗ ಸ್ಫೋಟವಾಗಿ ಅಮಾಯಕರು ಮೃತಪಟ್ಟಿದ್ದಾರೆ. ನಾನು ಸ್ಥಳದಲ್ಲೇ ಇದ್ದು, ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದ್ದೇನೆ. ಇದು ಸಮಗ್ರವಾಗಿ ತನಿಖೆಯಾಗಿ ಯಾರದ್ದೇ ತಪ್ಪಿದ್ದರೂ ನಿರ್ದಾಕ್ಷಿಣ್ಯ ಕಠಿಣ ಕ್ರಮ ವಹಿಸಲಾಗುವುದು ಎಂದರು.

BC Patil
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd