ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ದಿನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದರಿಂದಾಗಿ ರಾಜಧಾನಿ ಬೆಂಗಳೂರು ಜನರ ಆತಂಕ ಹೆಚ್ಚಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕೆಂದರು ಕಂದಾಯ ಸಚಿವ ಆರ್ ಅಶೋಕ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವ ಆರ್.ಅಶೋಕ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ನಮ್ಮ ಆರೋಗ್ಯದ ದೃಷ್ಟಿಯಿಂದ ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕಾಗಿದೆ. ಅಗತ್ಯ ಕಾರ್ಯಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹೋಗಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡೆ ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರ ಕೆಲಸಗಳನ್ನು ನಡೆಸಬೇಕು. ಕೋವಿಡ್ ಸೋಂಕಿನಿಂದ ನಮ್ಮಮ್ಮ ನಾವೇ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಹಾಗಾಗಿ ಅಗತ್ಯ ಇದ್ದಾರೆ ಮಾತ್ರ ಮನೆಯಿಂದ ಹೊರಗೆ ಬನ್ನಿ ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದಿ ಸಾರ್ವಜನಿಕರಲ್ಲಿ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.