ಶಾಲಾ-ಕಾಲೇಜು ಆರಂಭಕ್ಕೆ ಆತುರ ಬೇಡ.. ಹುಷಾರ್ : ಹೆಚ್ ಡಿಕೆ
ಬೆಂಗಳೂರು : ಕೊರೊನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಸರ್ಕಾರ ಮುಂದಾಗುತ್ತಿದ್ದು, ಇದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು.
ಶಾಲಾ-ಕಾಲೇಜುಗಳ ಆರಂಭಕ್ಕೆ ಶಿಕ್ಷಕ ಸಮುದಾಯ, ಶಾಲಾಭಿವೃದ್ಧಿ ಉಸ್ತುವಾರಿ ಸಮಿತಿ(ಎಸ್ಡಿಎಂಸಿ) ಹಾಗೂ ಪೋಷಕರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿರುವುದೇನೋ ಸರಿ. ಆದರೆ, ಅತಿರೇಕದ ನಿರ್ಧಾರ ಅನಾಹುತಕ್ಕೆ ದಾರಿಯಾಗುತ್ತದೆ ಎಚ್ಚರ.
ಬೆಳ್ಳಂಬೆಳಿಗ್ಗೆ ಜೈಲಿನಿಂದಲೇ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ನೆರೆಯ ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾದ ಮೂರೇ ದಿನದಲ್ಲಿ 260ಕ್ಕೂ ಹೆಚ್ಚು ಮಕ್ಕಳು ಹಾಗೂ 160ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ವರದಿ ತೀವ್ರ ಆತಂಕಕಾರಿ ಬೆಳವಣಿಗೆ. ಇದು ರಾಜ್ಯದಲ್ಲಿ ಪೋಷಕರ ಜಂಘಾಬಲವನ್ನೇ ಉಡುಗಿಸಿದೆ.
ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲಿ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯದ ಪ್ರಾಣದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ನಾಗರಿಕ ಸಮಾಜ ಒಪ್ಪದು. ಈ ಹಿಂದೆಯೇ ಸರ್ಕಾರಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂದು ಸಲಹೆ ನೀಡಿದ್ದೆ.
ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ.
ಇಂದಿನ ಬರ್ತ್ಡೇ ಖುಷಿಗೆ ಎಳ್ಳುನೀರು; ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿ..!
ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel