ಚಿಕ್ಕಬಳ್ಳಾಪುರ: ಶಾಸಕ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ.
ಏರ್ಪೋರ್ಟ್ನಲ್ಲಿ (Kempegowda International Airport) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಷಯಗಳನ್ನು ನನ್ನ ಬಳಿ ಚರ್ಚೆ ಮಾಡಬೇಡಿ. ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯುತ್ತದೆ ಎಂದು ಹೇಳಿದ್ದಾರೆ.
ವಿಪ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲಿಯೇ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸೂರಜ್ ಅವರ ಆಪ್ತ ಶಿವಕುಮಾರ್ (Shivakumar) ದೂರು ನೀಡಿದ್ದಾರೆ.
5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.