ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿದ್ದ ಯತ್ನಾಳ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಮರ್ಥಿಸಿಕೊಂಡಿದ್ದು, ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ‍್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ‍್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ‍್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. “ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ” ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್
ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...








