ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಡಬಲ್ ಸಂಭ್ರಮ Saaksha Tv
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಹಾಗೇ ಬೊಮ್ಮಾಯಿವರಿಗೆ 62ನೇ ವರ್ಷದ ಹುಟ್ಟು ಹಬ್ಬಕ್ಕೆ ಅನೇಕ ಗ್ಯಣ್ಯರು ಹಾರೈಸಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೀಗೆ ಅನೇಕ ರಾಷ್ಟ್ರ ಹಾಗೂ ರಾಜ್ಯ ನಾಯಕರು ಬೊಮ್ಮಾಯಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಇನ್ನೂ ಮುಖ್ಯಮಂತ್ರಿಗಳು 62ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ, ಹಸು ಮತ್ತು ಕರುವಿಗೆ ಪೂಜೆ ಸಲ್ಲಿಸಿ, ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆರ್ಟಿ ನಗರದ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದರು.
ಸಿಎಂ ಬೊಮ್ಮಾಯಿ ಅವರಿಗೆ ಡಬಲ್ ಸಂಭ್ರಮದ ಹಿನ್ನಲೆ ರಾಷ್ಟ್ರೀಯ ನಾಯಕರು ಶುಭ ಕೋರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಹಾಗೂ ಅವರ ನೇತೃತ್ವದ ಸರಕಾರ ಆರು ತಿಂಗಳು ತುಂಬಿಸಿದ್ದಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಮಾಜಿ ಸಿಎಂ ಯಡಿಯೂರಪ್ಪ ಕೂಡ ಸಿಎಂ ಬೊಮ್ಮಾಯಿಗೆ ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಸರಕಾರ 6 ತಿಂಗಳು ಪೂರೈಸಿದ ಹಿನ್ನಲೆ ಇಂದು ಸಂಜೆ 5 ಗಂಟೆಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮ ಮಲ್ಲೇಶ್ವರಂ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.