ಚಿಕ್ಕಬಳ್ಳಾಪುರ: ವರದಕ್ಷಿಣಿ ಕಿರುಕುಳದ ಹಿನ್ನೆಲೆಯಲ್ಲಿ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮುಸ್ಕಾನ್ ತಾಜ್, ವೆಂಕಟಗಿರಿಕೋಟೆ ಬಡಾವಣೆಯ ನಿವಾಸಿ ಆಜಾಮ್ ಎಂಬ ಯುವಕನ್ನು ಪ್ರೀತಿಸಿ ಮನೆಯವರ ವಿರೋಧ ಕಟ್ಟಿಕೊಂಡು 8 ತಿಂಗಳ ಹಿಂದೆ ಮದುವೆಯಾಗಿದ್ದರು. ಆದರೆ, ಪತಿಯ ಮನೆಯಲ್ಲಿ ಮುಸ್ಕಾನ್ ತಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯುವಕ ಆಜಾಮ್ ಕಾರ್ಯಕ್ರಮಗಳಲ್ಲಿ ತಮಟೆ ಬಾರಿಸಿ ಜೀವನ ಸಾಗಿಸುತ್ತಿದ್ದ. ಪ್ರೀತಿಸಿ ಹಠಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮದುವೆ ಮಾಡಿದ್ದರು. ಆರಂಭದಲ್ಲಿ ಇಬ್ಬರೂ ಸುಖವಾಗಿಯೇ ಬಾಳುತ್ತಿದ್ದರು. ಆದರೆ, ಇತ್ತೀಚೆಗೆ ಕೇವಲ 500 ರೂ. ಹಣಕ್ಕಾಗಿ ಮನಸ್ತಾಪ ಉಂಟಾಗಿತ್ತು. ಇದು ವಿಕೋಪಕ್ಕೆ ತೆರಳಿದೆ. ಇದರಿಂದ ನೊಂದು ತಮ್ಮ ಮಗಳು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತು ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.