ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಂವಿಧಾನ ರಚನೆಯ ಸಕಲ ಗೌರವ ಡಾ.ಅಂಬೇಡ್ಕರ್ ಒಬ್ಬರಿಗೇ ಸಲ್ಲಬೇಕು: ಸಿಎಂ…

admin by admin
March 4, 2020
in International, Newsbeat, Politics, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು: ಸಂವಿಧಾನ ರಚನೆಯ ಸಕಲ ಗೌರವವೂ ಡಾ.ಬಿ.ಆರ್.ಅಂಬೇಡ್ಕರ್ ಅವರೊಬ್ಬರಿಗೇ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸಂವಿಧಾನ ಕುರಿತ ವಿಶೇಷ ಚರ್ಚೆಯ ಎರಡನೇ ದಿನದ ಅಧಿವೇಶನದಲ್ಲಿ ಇಂದು ಸಂವಿಧಾನ ರಚನೆ, ಅದರ ಉದ್ದೇಶ, ಧ್ಯೇಯೋದ್ದೇಶಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಆರಂಭದಲ್ಲಿ ಸಚಿವ ಜೆ.ಸಿ ಮಾಧುಸ್ವಾಮಿ ಮಾತನಾಡುತ್ತಾ, ಸಂವಿಧಾನ ರಚನೆಗೆ ನಮ್ಮ ದೇಶದ ಉಪನಿಷತ್‌ಗಳು, ವೇದಗಳು ಪ್ರೇರಣೆಯಾಗಿವೆ. ಆಡಳಿತ ಹೇಗೆ ನಡೆಸಬೇಕು ಎಂಬುದನ್ನು ವೇದಗಳಲ್ಲಿ ತಿಳಿಸಲಾಗಿದೆ. ನಮ್ಮ ದೇಶದ ಸಂವಿಧಾನ ಅತ್ಯುನ್ನತವಾಗಿದೆ ಎಂದರು.
ಈ ವೇಳೆ ಎದ್ದು ನಿಂತ ಹೆಚ್ ಕೆ ಪಾಟೀಲ್ ಅವರು, ಸ್ಪೀಕರ್ ಅವರು ಸಂವಿಧಾನದ ವಿಷಯದ ಕುರಿತು ಭಾಷಣ ಮಾಡುವಾಗ ಕೆಲವು ಪ್ರಮುಖ ಅಂಶಗಳನ್ನು ಕೈಬಿಟ್ಟಿದ್ದಾರೆ. ಕಾಂಗ್ರೆಸ್, ಸ್ವಾತಂತ್ರ‍್ಯ ಚಳವಳಿ, ಸ್ವಾತಂತ್ರ‍್ಯ ಹೋರಾಟಗಾರರನ್ನು ಭಾಷಣದಲ್ಲಿ ಪ್ರಸ್ತಾಪಿಸಿಲ್ಲ. ಸ್ಪೀಕರ್ ಅವರ ಪೂರ್ವಾಶ್ರಮದಿಂದ ಪ್ರಭಾವಿತಗೊಂಡಿರುವುದು ಭಾಷಣದಲ್ಲಿ ಸ್ಪಷ್ಟಗೊಂಡಿದೆ ಎಂದು ಎಚ್.ಕೆ.ಪಾಟೀಲ್ ಆಕ್ಷೇಪಿಸಿದರು.

Dr BR Amebadkar

Related posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

March 10, 2026
ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

March 10, 2026

ಇದಕ್ಕೆ ಸ್ಪಷ್ಟನೆ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಉದ್ದೇಶಪೂರ್ವಕವಾಗಿ ಯಾವುದೇ ಅಂಶಗಳನ್ನು ಕೈಬಿಟ್ಟಿಲ್ಲ. ಆದರೆ ಸ್ಥಳದ ಅಭಾವದಿಂದ ಕೆಲವು ಅಂಶಗಳು ಕೈಬಿಟ್ಟಿರಬಹುದು. ತಪ್ಪಾಗಿದ್ದರೆ ತಿಳಿಸಿ, ಸರಿಪಡಿಸಿಕೊಳ್ಳಲು ಸಿದ್ಧನಿದ್ದೇನೆ ಎಂದು ಸಮಜಾಯಿಷಿ ನೀಡಿದರು.
ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ, ಸಂದರ್ಶನವೊಂದರಲ್ಲಿ ಬಿ.ಎನ್.ರಾವ್ ಅವರು ಇಂಗ್ಲೀಷ್ ಭಾಷೆಯ ಮೇಲೆ ಪ್ರಭುತ್ವ ಹೊಂದಿದ್ದರು. ಹಾಗಾಗಿ ಅವರು ಬಿ.ಆರ್.ಅಂಬೇಡ್ಕರ್ ಅವರಿಗೆ ಭಾಷಾಂತರಕಾರರಾಗಿ ಕೆಲಸ ಮಾಡಿದ್ದರು ಎಂದು ಹೇಳಲಾಗಿದೆ. ಆದರೆ ಅಂಬೇಡ್ಕರ್ ಸ್ವತಃ ಆಕ್ಸ್ಫರ್ಡ್ ನಲ್ಲಿ ಕಲಿತು ಬಂದವರು. ಇಂಗ್ಲೀಷ್‌ನಲ್ಲಿ ಪ್ರಭುತ್ವ ಸಾಧಿಸಿದ್ದರು. ಅವರಿಗೆ ಭಾಷಾಂತರಕಾರರ ಅಗತ್ಯವೇ ಇರಲಿಲ್ಲ. ಸಂವಿಧಾನ ರಚನೆಯ ಸಂಪೂರ್ಣ ಗೌರವ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಪ್ರತಿಪಾದಿಸಿದರು. ಈ ವಿಷಯ ವಿವಾದಕ್ಕೆ ಕಾರಣವಾಗಬಹುದು ಎಂಬ ಆತಂಕದಿಂದ ಎದ್ದು ನಿಂತ ಬಿ.ಎಸ್.ಯಡಿಯೂರಪ್ಪ, ಸಂವಿಧಾನ ರಚನೆಯ ಸಕಲ ಗೌರವವೂ ಡಾ.ಬಿ.ಆರ್.ಅಂಬೇಡ್ಕರ್ ಅವರೊಬ್ಬರಿಗೇ ಸಲ್ಲಬೇಕು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಒಬ್ಬರೇ ಸಂವಿಧಾನ ಕರಡು ಸಿದ್ಧಪಡಿಸಿದ್ದರು. ದಮನಿತರು, ತುಳಿತಕ್ಕೆ ಒಳಗಾದವರಿಗೆ ನೆರವಾಗಬೇಕು, ಅವರನ್ನು ಮೇಲೆತ್ತಬೇಕು ಎಂಬುದು ಅಂಬೇಡ್ಕರ್ ಅವರ ಉದ್ದೇಶವಾಗಿತ್ತು ಎಂದು ಹೇಳುವ ಮೂಲಕ ವಿವಾದವಾಗದಂತೆ ನೋಡಿಕೊಂಡರು.

Tags: Dr BR AmbedkarSiddaramaiah
ShareTweetSendShare
Join us on:

Related Posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

by Shwetha
March 10, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪತ್ರಕರ್ತರಿಗಾಗಿ ಆಯೋಜಿಸಿದ್ದರು ಎನ್ನಲಾದ 'ಬಜೆಟ್ ಪೂರ್ವ ಗುಂಡು ಪಾರ್ಟಿ' ರಾಜ್ಯ ರಾಜಕಾರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram