ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ನಿಧನ
ಉಡುಪಿ, ಡಿಸೆಂಬರ್13: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು.
ಇವರು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದರು. ನಟ ದಿ. ವಿಷ್ಣುವರ್ಧನ್ ಆಧ್ಯಾತ್ಮಿಕ ಗುರುಗಳಾಗಿದ್ದ ಬನ್ನಂಜೆ ಗೋವಿಂದಾಚಾರ್ಯ ಅವರು ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು.
ಪ್ರವಚನಕಾರರಾಗಿ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿ, ಪತ್ರಕರ್ತರಾಗಿದ್ದ ಅವರು ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಭಾಷಾಂತರ ಮಾಡಿದ್ದರು.
ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಅವರು ಸಂಭಾಷಣೆಯನ್ನು ಬರೆದಿದ್ದರು.
ಬಾಣಭಟ್ಟನ ಕಾದಂಬರಿ, ಕಾಳೀದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಅವರ ಅನುವಾದಿತ ಕೃತಿಗಳಲ್ಲಿ ಮುಖ್ಯವಾದವು.
ಶ್ರೀ ಶ್ರೀ ತ್ರಿವಿಕ್ರಮಾಚಾರ್ಯದಾಸರ ಆನ೦ದಮಾಲಾ, ತ್ರಿವಿಕ್ರಮ ಪ೦ಡಿತರ ವಾಯುಸ್ತುತಿ, ವಿಷ್ಣುಸ್ತುತಿ ಇತ್ಯಾದಿ ಕೃತಿಗಳಿಗೆ ಡಾ. ಬನ್ನಂಜೆ ಗೋವಿಂದಾಚಾರ್ಯ ಟಿಪ್ಪಣಿಯನ್ನು ಬರೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಕೆಮ್ಮು ಮತ್ತು ಶೀತವನ್ನು ಸುಲಭವಾಗಿ ಗುಣಪಡಿಸಲು ಅಡಿಗೆ ಮನೆಯಲ್ಲಿರುವ ಮನೆಮದ್ದುಗಳುhttps://t.co/oN7YerRCki
— Saaksha TV (@SaakshaTv) December 12, 2020
ಪಾಕ್ ನಲ್ಲಿ ಅಲ್ಪಸಂಖ್ಯಾತರ ಕಣ್ಮರೆಗೆ ಆತಂಕ ವ್ಯಕ್ತಪಡಿಸಿದ ಯುಎನ್ ತಜ್ಞರು – ಭಾರತವನ್ನು ರಾಕ್ಷಸ ರಾಷ್ಟ್ರ ಎಂದ ಪಾಕ್ ಪ್ರಧಾನಿhttps://t.co/ctQzl9kSQK
— Saaksha TV (@SaakshaTv) December 12, 2020