ಸಚಿವ ಸ್ಥಾನಕ್ಕೆ ಡಾ.ಹರ್ಷವರ್ಧನ್ ರಾಜೀನಾಮೆ
ನವದೆಹಲಿ : ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಇಂದು ಮೋದಿ ಸಚಿವ ಸಂಪುಟ ಪುನಾರಚನೆ ಆಗಲಿದ್ದು, ಈಗಾಗಲೇ ಸದಾನಂದಗೌಡ ಸೇರಿದಂತೆ ಹಲವು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದೀಗ ಹರ್ಷವರ್ಧನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹರ್ಷವರ್ಧನ್ ಅವಧಿಯಲ್ಲಿ ಆರೋಗ್ಯ ಸಚಿವಾಲಯ ಸಾಕಷ್ಟು ಟೀಕೆಗೆ ಗುರಿಯಾಗಿತ್ತು.
ಕೊರೊನಾ ವಿಚಾರದಲ್ಲಿ ವಿಪಕ್ಷಗಳು ಆರೋಗ್ಯ ಸಚಿವಾಲಯದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದರು. ಇದು ಸರ್ಕಾರಕ್ಕೆ ಭಾರಿ ಮುಜುಗರ ಉಂಟು ಮಾಡಿತ್ತು.
ಜೊತೆ ಸರ್ಕಾರಕ್ಕೆ ಡ್ಯಾಮೇಜ್ ಕೂಡ ಮಾಡಿತ್ತು. ಇದೇ ಕಾರಣಕ್ಕಾಗಿ ಇದೀಗ ಆರೋಗ್ಯ ಸಚಿವರ ರಾಜೀನಾಮೆಗೆ ಕಾರಣವಾಗಿದೆ ಎಂದು ಗುಸುಗುಸು ನಡೆಯುತ್ತಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು.
ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು.