ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ : ಡಾ.ಕೆ.ಸುಧಾಕರ್
ಬೆಂಗಳೂರು : ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರೇನು ಮಾಡಬೇಕಿತ್ತು ಎಂದು ಹೇಳಲು ಸಾಧ್ಯವಿಲ್ಲ. ಅವರ ತಂಡ ಸದಸ್ಯನಾಗಿ ಅವರಿಗೆ, ಸರ್ಕಾರಕ್ಕೆ, ಪಕ್ಷಕ್ಕೆ ಒಳ್ಳೆಯ ಹೆಸರು ತರಲು ಆತ್ಮವಂಚನೆ ಮಾಡಿಕೊಳ್ಳದೆ ಕೆಲಸ ಮಾಡುತ್ತಿದ್ದೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರದಲ್ಲಿ ನೇರವಾಗಿ ಮುಖ್ಯಮಮಂತ್ರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಮೊದಲು ಇಲಾಖೆಗಳು ಬೇರೆಯಾಗಿದ್ದರಿಂದ ಕೋವಿಡ್ ನಿರ್ವಹಣೆ ಸಮಸ್ಯೆಯಾಗಿತ್ತು.
ನಂತರ ಒಂದೇ ಇಲಾಖೆ ಆಗಿದ್ದರಿಂದ ಕೋವಿಡ್ ನಿಯಂತ್ರಣಕ್ಕೆ ಬಂತು. ಲಸಿಕೆ ಬಂದ ಬಳಿಕ ಎರಡೂ ಇಲಾಖೆಗಳ ಸಂಯೋಜನೆ ಮೂಲಕ ಹೆಚ್ಚಿನ ಜನರಿಗೆ ತಲುಪಿಸಬೇಕಿದೆ.
ಆಡಳಿತ ವೈಫಲ್ಯದಿಂದ ಸಮಸ್ಯೆಯಾಗಬಾರದು. ಜನರ ಹಿತದೃಷ್ಟಿಯಿಂದ ಎರಡೂ ಇಲಾಖೆಗಳನ್ನು ಒಬ್ಬರಿಗೇ ನೀಡಬೇಕು ಎಂದು ಸಿಎಂಗೆ ಮನವಿ ಮಾಡುತ್ತೇನೆ. ಕೋವಿಡ್ ನ 2 ನೇ ಅಲೆ ಬಂದರೆ ಇಂತಹ ಸಿದ್ಧತೆ ಅಗತ್ಯ ಎಂದರು.
ನಾವೆಲ್ಲರೂ ಆತ್ಮೀಯರು. ಮುಖ್ಯಮಂತ್ರಿಗಳ ಕೈ ಬಲಪಡಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಸಿಎಂ ಕೈ ಬಲಪಡಿಸಲು ಒಂದು ರೀತಿಯಲ್ಲಿ ರಾಜಕೀಯ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡು, ಶೇಕಡಾ ಮೂರರಷ್ಟು ಮತ ಇರದಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮುವತ್ತೈದು ಸಾವಿರ ಬಹುಮತಗಳಿಂದ ಗೆದ್ದು ಬಂದಿದ್ದೇನೆ.
ಹಾಗೆಯೇ ಎಂಟಿಬಿ ನಾಗರಾಜ್ ಅವರು ವಸತಿ ಸಚಿವರಾಗಿದ್ದವರು ನನ್ನ ಮಾತು ಕೇಳಿ ರಾಜೀನಾಮೆ ನೀಡಿ ಬಂದರು. ಹೀಗೆ ಎಲ್ಲ ಸಚಿವರ ರಕ್ಷಣೆ ಕೂಡ ನನಗೆ ಮುಖ್ಯ ಎಂದರು.
ವ್ಯಾಕ್ಸಿನೇಷನ್ ನಡೆಯುತ್ತಿರುವ ಈ ಸಂದರ್ಭದಲ್ಲಿ ಮತ್ತು ತಜ್ಞರ ಪ್ರಕಾರ ಫೆಬ್ರವರಿ ಯಲ್ಲಿ ಎರಡನೇ ಅಲೆ ಸಾಧ್ಯತೆಗಳ ಹಿನ್ನೆಲೆಯಲ್ಲಿ ವೈಜ್ಞಾನಿಕ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಇದನ್ನು ಮುಖ್ಯಮಂತ್ರಿಯವರಿಗೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel