ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಸಚಿವ ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
June 14, 2021
in Newsbeat, State, ರಾಜ್ಯ
dr sudhakar saakshatv bengaluru
Share on FacebookShare on TwitterShare on WhatsappShare on Telegram

ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಅಲೋಪತಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎಷ್ಟೇ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿಷ್ಕಾರವನ್ನು ಹೆಚ್ಚಾಗಿ ಮಾಡಬೇಕು. ಪ್ರತಿ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದರು.

Related posts

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

July 29, 2026
ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

July 29, 2026

ಆಕ್ಸಫರ್ಡ್ ವಿಶ್ವವಿದ್ಯಾಲಯ ಕೋವಿಡ್ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡುಹಿಡಿಯುವಂತೆ ಸಂಶೋಧನೆ ನಡೆಯಬೇಕು. ಎನ್‍ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲಿ ಕೂಡ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದರು.

dr k sudakar

ರಾಜ್ಯಪಾಲರೊಂದಿಗೆ ಚರ್ಚೆ :

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ರಾಜ್ಯಪಾಲರು ಚರ್ಚೆ ನಡೆಸಲು ಆಗಿಲ್ಲ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ನಂತರ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಶುದ್ಧ ಚಾರಿತ್ರ್ಯವಿರುವವರು ಕುಲಪತಿಯಾಗಲು ಸಾಧ್ಯ :

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠಪಕ್ಷ ನಾನು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್ ಲಾಕ್ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್, ಥಿಯೇಟರ್, ಹೋಟೆಲ್ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದರು.

Tags: bangaloreCorona VirusDr K Sudakar
ShareTweetSendShare
Join us on:

Related Posts

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

by admin
July 29, 2026
0

29-07-2026 ಬುಧವಾರ ಗುರು ಪೂರ್ಣಿಮೆ. ಈ ಶುಭ ದಿನದಂದು ಮಹರ್ಷಿ ವೇದ ವ್ಯಾಸರು ಜನಿಸಿದ ಕಾರಣ ಇದನ್ನು ವ್ಯಾಸ ಜಯಂತಿ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ....

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

by Shwetha
July 29, 2026
0

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಎಸಗಿರುವ ಸಾಲು ಸಾಲು ಅಕ್ರಮಗಳ ಬೆನ್ನಲ್ಲೇ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ ನೇತೃತ್ವದಲ್ಲಿ ನೂತನ ಕಾರ್ಯಪಡೆ ರಚಿಸಿರುವುದನ್ನು ಕಾಂಗ್ರೆಸ್ ಪಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram