ಟ್ರೆಕ್ಕಿಂಗ್ ಮಾಡಲಿ ಅವರ ಆರೋಗ್ಯಕ್ಕೆ ಒಳ್ಳೆಯದು : ಕೈ ಪಾದಯಾತ್ರೆಗೆ ಸುಧಾಕರ್ ವ್ಯಂಗ್ಯ dr k sudhakar ashes-out-at-congress saaksha tv
ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಧ್ಯೆ ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಮಾಡಲು ರೆಡಿಯಾಗಿದೆ.
ನಾಳೆಯಿಂದ ಕಾಂಗ್ರೆಸ್ ಪಾದಯಾತ್ರೆ ಶುರುವಾಗಲಿದೆ. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಕಾಂಗ್ರೆಸ್ ನಾಯಕರು ಪಾದಯಾತ್ರೆಗೆ ಹಣಿಯಾಗಿರೋದು ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಆರೋಗ್ಯ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ವರು ರೈಲಿನಲ್ಲಾದರೂ ಹೋಗಲಿ, ಬಸ್‍ನಲ್ಲಾದರೂ ಹೋಗಲಿ, ಟ್ರೆಕ್ಕಿಂಗ್ ಮಾಡಲಿ.
ಇವೆಲ್ಲವೂ ಅವರ ಆರೋಗ್ಯಕ್ಕೆ ಒಳ್ಳೆಯದು. ಮಾಡುವುದನ್ನು ಮಾಡಲಿ, ಸಮಯ ನೋಡಿ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ ದುರಾದೃಷ್ಠಕರ.
ಸರ್ಕಾರದ ಕಾನೂನು ಪಾಲನೆ ಮಾಡದ ಪಕ್ಷಕ್ಕೆ ವಿಪಕ್ಷ ಅಂತ ಕರೆಯೋಕೆ ಆಗುತ್ತಾ..?
ಮುಂದೊಂದು ದಿನ ಇವರೇ ಆಡಳಿತ ಮಾಡಿದಾಗ, ವಿಪಕ್ಷಗಳು ಛೀಮಾರಿ ಹಾಕಿದಾಗ ಇವರಿಗೆ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.









