Dr.K.Sudhakar | ಮೇಕೆದಾಟು ಪಾದಯಾತ್ರೆ | ಕಾಂಗ್ರೆಸ್ ಗೆ ಬದ್ಧತೆ ಇಲ್ಲ
ಚಿಕ್ಕಬಳ್ಳಾಪುರ : ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಇದೇ ಫೆಬ್ರವರಿ 27 ರಿಂದ ಮತ್ತೆ ಪಾದಯಾತ್ರೆ ಆರಂಭಿಸಲಿದೆ.
ಈ ಬಗ್ಗೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸುಧಾಕರ್, ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು.
ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು.
ಆದರೆ 7 ವರ್ಷ ಕಾಲ ಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೇ ವೇಳೆ ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ.
ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ.
ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು.
ಸರ್ಕಾರದ ಮಾರ್ಗಸೂಚಿಯಂತೆ ಮುಂದುವರೆಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ.
ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದರು. dr-k-sudhakar-Congress mekedatu padayatre Saaksha Tv