ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ನ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್

Namratha Rao by Namratha Rao
November 27, 2021
in Newsbeat, State, ರಾಜ್ಯ
dr sudhakar saakshatv bengaluru
Share on FacebookShare on TwitterShare on WhatsappShare on Telegram

ಕೋವಿಡ್ ನ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್

45 ಲಕ್ಷ ಜನರು ಎರಡನೇ ಡೋಸ್ ಪಡೆಯಲು ಬಾಕಿ – ಸುಧಾಕರ್

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಲಸಿಕೆ ಪಡೆಯಿರಿ, ಸುರಕ್ಷತಾ ಕ್ರಮ ಪಾಲಿಸಿ – ಸುಧಾಕರ್

ಬೆಂಗಳೂರು : ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

ಎರಡನೇ ಡೋಸ್ ಪಡೆಯಿರಿ

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.

25 ರೂಪಾಂತರಿ

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

 ಔಷಧಿ ಖರೀದಿ

ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

Tags: #saakshatvBJPCovid19Dr. K SudhakarHealthkarnataka state minister
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram