ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯಗಳ ರೀತಿ ಸಾವಿನ ಸಂಖ್ಯೆ ಹೆಚ್ಚಾಗೋದು ಆಗೋದು ಬೇಡ – ಸುಧಾಕರ್
ಅನೇಕ ರಾಜ್ಯಗಳಲ್ಲಿ ಕೋವಿಡ್ ಸಾವಿನ ಪ್ರಮಾಣ ಹೆಚ್ಚಿದೆ. ಇದು ನಮ್ಮ ರಾಜ್ಯದಲ್ಲಿ ಆಗೋದು ಬೇಡ. ನಮ್ಮ ರಾಜ್ಯದ ಪರಿಸ್ಥಿತಿ ನೋಡಿಕೊಂಡು ಸೂಕ್ತ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ.
ಇದೇ ವೇಲೆ ರಾಜ್ಯದ ಪರಿಸ್ಥತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಲಲಾಗುವುದು. ಬೇರೆ ರಾಜ್ಯಗಳಲ್ಲಿ ಏನಿದೆ. ಪರಿಸ್ಥಿತಿ ಹೇಗಿದೆ. ಏನೆಲ್ಲಾ ಕ್ರಮಗಳನ್ನ ತೆಗೆದುಕೊಳ್ಳಲಾಗ್ತಿದೆ ಅಂತಲೂ ನೋಡ್ತೇವೆ. ವಲಯವಾರು ಕೊರೋನಾ ನಿಯಂತ್ರಣಕ್ಕೆ ಸಚಿವರು ಶ್ರಮ ಹಾಕ್ತಿದಾರೆ. ಜನರ ಸಹಭಾಗಿತ್ವ ಅಗತ್ಯವಿದೆ ಎಂದಿದ್ದಾರೆ.








