ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr. K. Sudhakar | ಗೌರಿಬಿದನೂರಿನಲ್ಲಿ ಕಮಲ ಅರಳಿಸಲು ಕಂಕಣ ಬದ್ಧರಾಗಿ

Mahesh M Dhandu by Mahesh M Dhandu
September 2, 2022
in Newsbeat, Politics, ರಾಜಕೀಯ
HDK - Sudhakar should resign

HDK - Sudhakar should resign

Share on FacebookShare on TwitterShare on WhatsappShare on Telegram

Dr. K. Sudhakar | ಗೌರಿಬಿದನೂರಿನಲ್ಲಿ ಕಮಲ ಅರಳಿಸಲು ಕಂಕಣ ಬದ್ಧರಾಗಿ

ಚಿಕ್ಕಬಳ್ಳಾಪುರ:  ಗೌರಿಬಿದನೂರಿನಲ್ಲಿ ಬಿಜೆಪಿ ನೆಲೆ ಭದ್ರವಾಗಿದ್ದು ಒಗ್ಗಟ್ಟು ಮತ್ತು ಒಂದೇ ಗುರಿಯೊಂದಿಗೆ  ಕ್ಷೇತ್ರದಲ್ಲಿ ಕಮಲ ಅರಳಿಸಲು ಶ್ರಮಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.

Related posts

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

February 17, 2026
ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

February 17, 2026

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮುಂದೆ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜನೋತ್ಸವ ಕಾರ್ಯಕ್ರಮ ಗಟ್ಟಿ ಅಡಿಪಾಯ ಆಗಬೇಕು ಎಂದು ಸಲಹೆ ನೀಡಿದರು.

ಜು.28ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಸೆ.8ರಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಸ್ತುತ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಈ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ್ದರೆ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದೆ. ಹಾಗಾಗಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಜನಸಾಮಾನ್ಯರಿಗೆ ನೀಡಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಬೇಕು. ಸರ್ಕಾರದ ರಿಪೋರ್ಟ್ ಕಾರ್ಡ್ ಜನರ ಮುಂದಿಡಬೇಕು. ಅಂತಿಮವಾಗಿ ನಿರ್ಣಯ ಮಾಡುವುದು ಜನಸಾಮಾನ್ಯರೇ ಆಗಿರುವುದರಿಂದ ಜನರ ಮುಂದೆ ಎಲ್ಲ ಮಾಹಿತಿ ಇಡಬೇಕು ಎಂಬ ಉದ್ಧೇಶದಿಂದ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಬಿಜೆಪಿ ಸಿದ್ಧಾಂತ ದೇಶಕ್ಕಾಗಿ ಮೊದಲ ಹೋರಾಟ ಮಾಡುವುದು, ನಂತರ ರಾಜಕೀಯ ಪಕ್ಷ, ಕೊನೆಯದಾಗಿ ನಮ್ಮ ಬಗ್ಗೆ ನಾವು ವಿಚಾರ ಮಾಡಬೇಕು. ಅದೇ ವಿಚಾರವಾಗಿ ದೇಶಕ್ಕೆ ಸಮರ್ಪಣೆ ಮಾಡಿಕೊಳ್ಳಬೇಕು, ಮಂಗಳೂರಿನಲ್ಲಿ 3 ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.

ಗುರುವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಆಗಮಿಸಿದ್ದರು. ನ್ಯಾಚುರೋಪತಿ ಆಸ್ಪತ್ರೆಯನ್ನು ಅವರು ಉದ್ಘಾಟಿಸಿದ್ದಾರೆ. ಪ್ರಜಾಪ್ರಭುತ್ವದ ತತ್ವಗಳನ್ನು ಅಳವಡಿಸಿಕೊಂಡ ಶ್ರೇಷ್ಠ ಸಂತ ಎಂದು ಅವರಿಗೆ ಹೇಳಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಈ ಪಕ್ಷದ ಶಕ್ತಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಸವರಾಜ ಬೊಮ್ಮಾಯಿ ಅವರು ಉನ್ನತ ಸ್ಥಾನ ಅಲಂಕರಿಸಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯಾಗಿದೆ ಎಂದರು.

Dr. K. Sudhakar press meet in gauribidanur saaksha tv
Dr. K. Sudhakar press meet in gauribidanur saaksha tv

ಗೌರಿಬಿದನೂರು ಕ್ಷೇತ್ರವನ್ನು ಪಕ್ಷ ಈಗಾಗಲೇ ಗುರ್ತಿಸಿದೆ. ರಾಜ್ಯ ಮಟ್ಟದ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ಈ ಕ್ಷೇತ್ರಕ್ಕೆ ಸಿಕ್ಕಿದೆ. ಸೆ.8 ರಂದು ನಡೆಯಲಿರುವ ಜನೋತ್ಸವ ಪಕ್ಷ ಸಂಘಟನೆಗೆ ಒಂದು ಅವಕಾಶ. ಗೌರಿಬಿದನೂರಿನಲ್ಲಿರುವ 31 ಗ್ರಾಪಂ, ನಗರದಲ್ಲಿರುವ 31 ವಾರ್ಡುಗಳ ಜವಾಬ್ದಾರಿ ಸ್ಥಳೀಯ ಮುಖಂಡರಿಗೆ ವಹಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಮುಖ್ಯವಾಗಿ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರುವ ಕೆಲಸವಾಗಬೇಕು,  ವಿದ್ಯಾಸಿರಿ ಯೋಜನೆ, ಕೃಷಿ ಸಮ್ಮಾನ್ ಯೋಜನೆಯಂತಹ ಫಲಾನುಭವಿಗಳು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ರೈತರ ಖಾತೆಗೆ ಬರುತ್ತಿರುವ ಹಣ ನೀಡುತ್ತಿರುವವರು ಯಾರು ಎಂಬ ಅರಿವು ಜನಸಾಮಾನ್ಯರಿಗೆ ಇರಬೇಕಲ್ಲವೇ ಎಂದು ಸಚಿವರು ಪ್ರಶ್ನಿಸಿದರು.

ಈ ಹಿಂದೆ ಯಾವುದೇ ಯೋಜನೆಯ ಹಣ ಪಡೆಯಬೇಕಾದರೆ ಮಧ್ಯವರ್ತಿಗಳಿಗೆ ಹಣ ಸಲ್ಲಿಸಬೇಕಿತ್ತು, ಅಲ್ಲದೆ ತಿಂಗಳುಗಳ ಗಟ್ಟಲೆ ಕಚೇರಿಗಳಿಗೆ ಅಳೆಯಬೇಕಿತ್ತು, ಆದರೆ ಈಗ ಅಂತಹ ಸ್ಥಿತಿ ಇಲ್ಲ. ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ಪರಿಹಾರ, ಆಯುಷ್ಮಾನ್ ಭಾರತ್ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರುಪಾಯಿ ಉಚಿತ ಚಿಕಿತ್ಸೆ,  ಇದು ವಾರ್ಷಿಕ ಯೋಜನೆಯಾಗಿದ್ದು ವಿಶ್ವದಲ್ಲಿಯೇ ಇಂತಹ ಯೋಜನೆಯಿಲ್ಲ. ರಾಜ್ಯದ 5 ಕೋಟಿ ಜನರಿಗೂ ಉಚಿತ ಕಾರ್ಡು ವಿತಣೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದರು.

Tags: #Saaksha TVBJPCHIKKABALLAPURADr. K Sudhakar
ShareTweetSendShare
Join us on:

Related Posts

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram