ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
December 23, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಡುವೆ, ಯುನೈಟೆಡ್ ಕಿಂಗ್ ಡಮ್ ನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯು.ಕೆ.ಯಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸುದೀರ್ಘ ಸಭೆ ನಡೆಸಿದರು. ನಂತರ ಸಚಿವರು ಗೃಹಕಚೇರಿ ಕೃಷ್ಣಾಗೆ ತೆರಳಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಭೆಯಲ್ಲಾದ ಚರ್ಚೆ ಕುರಿತು ಮಾಹಿತಿ ನೀಡಿದರು.

Related posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

March 13, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ನೈಟ್ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಇಡೀ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗುತ್ತದೆ. ಜನರು ರಾತ್ರಿ 10 ರೊಳಗೆ ತಮ್ಮ ಎಲ್ಲ ಚಟುವಟಿಕೆಗಳನ್ನು ಮುಗಿಸಿ ಮನೆಗೆ ಮರಳಬೇಕು. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತುರ್ತು ಸೇವೆಗಳು ಹೇಗಿರಬೇಕು, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗುತ್ತದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಯಿಂದ ನಿಗಾ

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ರಾಜ್ಯಕ್ಕೆ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಯು.ಕೆ.ಯಿಂದ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಬೇಕು. ಮೊದಲ 14 ದಿನಗಳ ಕಾಲ ಅವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸುತ್ತಾರೆ. ನಂತರದ 14 ದಿನ ಅವರೇ ಸ್ವತಃ ನಿಗಾ ಇರಿಸಿಕೊಳ್ಳಬೇಕು ಎಂದು ವಿವರಿಸಿದರು.

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ಯು.ಕೆ.ಯಿಂದ ರಾಜ್ಯಕ್ಕೆ 2,500 ಜನರು ಬಂದಿದ್ದಾರೆ. ಪ್ರತಿ ದಿನ ಯು.ಕೆ.ಯಿಂದ ಎರಡೇ ವಿಮಾನ ಬಂದಿದೆ. ಯಾವ ವಿಮಾನದಲ್ಲಿ ಎಷ್ಟು ಜನ ಬಂದಿದ್ದಾರೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗುವುದು. ಇಷ್ಟೂ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುವುದು. ಯಾರಲ್ಲಾದರೂ ರೋಗ ಲಕ್ಷಣ ಕಂಡುಬಂದರೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ತಿಳಿಸಿದರು.

Dr K Sudhakar

ನಿಮ್ಹಾನ್ಸ್, ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವೈರಸ್ ಬಗ್ಗೆ ಅಧ್ಯಯನ ಮಾಡುವ ನಾಲ್ಕು ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಪಾಸಿಟಿವ್ ಆದವರ ಮಾದರಿಯನ್ನು ಈ ಸಂಸ್ಥೆಗಳಿಗೆ ನೀಡಿ ಹೊಸ ಪ್ರಭೇದದ ವೈರಸ್ ಬಗ್ಗೆ ಅಧ್ಯಯನ ಮಾಡಲಾಗುವುದು. ಅಗತ್ಯವಿದ್ದರೆ ಜೀನ್ ಸೀಕ್ವೆನ್ಸ್ ಅಧ್ಯಯನ ಮಾಡಲಾಗುವುದು ಎಂದು ಹೇಳಿದರು.

ತಪ್ಪು ಮಾಹಿತಿ ನೀಡಬೇಡಿ

ರಾಜಕೀಯ ಮುಖಂಡರೊಬ್ಬರು ಯು.ಕೆ.ಯಿಂದ 14 ಸಾವಿರ ಜನರು ಬಂದಿದ್ದಾರೆ ಎಂದು ತಪ್ಪಾಗಿ ಹೇಳಿದ್ದಾರೆ. ನಮ್ಮ ಸರ್ಕಾರಕ್ಕೆ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ, ಪ್ರಯಾಣಿಕರ ಸಂಖ್ಯೆಯನ್ನು ಮರೆಮಾಚುವ ಅಗತ್ಯವಿಲ್ಲ. ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಇಲ್ಲ. ಯಾವುದೇ ರಾಜಕೀಯ ಮುಖಂಡರು ಸರಿಯಾದ ಮಾಹಿತಿ ಕಲೆಹಾಕಿ ಮಾತನಾಡಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಇದು ಅನಿವಾರ್ಯ

ಕರ್ಫ್ಯೂ ನಿರ್ಧಾರಕ್ಕೆ ಬಾರ್ ಮತ್ತು ಹೋಟೆಲ್ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, ರಾತ್ರಿ ಕರ್ಫ್ಯೂ ನಿರ್ಧಾರವನ್ನು ಸಂತೋಷದಿಂದೇನೂ ತೆಗೆದುಕೊಂಡಿಲ್ಲ. ಬಹಳ ಅನಿವಾರ್ಯ, ಅವಶ್ಯಕತೆ ಇರುವುದರಿಂದ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.

ನೈಟ್ ಕರ್ಫ್ಯೂ ಜಾರಿ ದಿನಾಂಕ, ಸಮಯ ಬದಲಾವಣೆ : ಡಿಸೆಂಬರ್ 24ರಿಂದ ಕರ್ಫ್ಯೂ

ರಾತ್ರಿ 10 ಗಂಟೆ ನಂತರ ಕರ್ಫ್ಯೂ ವಿಧಿಸಲಾಗಿದೆಯೇ ಹೊರತು ಅದಕ್ಕೂ ಮುಂಚೆ ಯಾವುದೇ ಚಟುವಟಿಕೆ ನಿಷೇಧ ಮಾಡಿಲ್ಲ. ಕೃಷಿ ಚಟುವಟಿಕೆಗಳಿಗೆ, ಸರಕು ಸಾಗಣಿಕೆಗೆ, ಮಾರಾಟಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದಲ್ಲಿ ಎಲ್ಲರಿಗೂ ಜವಾಬ್ದಾರಿ ಇದೆ. ಕೇವಲ ಹಣ ಸಂಪಾದನೆ ಹಾಗೂ ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡದೆ, ಜನರ ಸುರಕ್ಷತೆ ಹಾಗೂ ಆರೋಗ್ಯವನ್ನು ಕೂಡ ನೋಡಬೇಕು. ಕೇವಲ ಒಂಬತ್ತು ದಿನಗಳು ಮಾತ್ರ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಹೊಸ ಪ್ರಭೇದದ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎಂದರು.

ಬೆಂಗಳೂರಿನ ಆರ್ಚ್ ಬಿಷಪ್ ನವರು ನನಗೆ ಮಾಹಿತಿ ಕಳುಹಿಸಿದ್ದಾರೆ. ಯಾವುದೇ ಸಮಾರಂಭ ಮಾಡುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದೇನೆ ಎಂದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CoronacurfewDr. K Sudhakar
ShareTweetSendShare
Join us on:

Related Posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

by Shwetha
March 13, 2026
0

ಕರ್ನಾಟಕದಲ್ಲಿ ಡೆಂಗ್ಯೂ ಮಾದರಿಯ ಲಕ್ಷಣಗಳನ್ನು ಉಂಟುಮಾಡುವ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram