ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Dr. K Sudhakar : ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ – ಸಚಿವ ಡಾ.ಕೆ.ಸುಧಾಕರ್

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

Naveen Kumar B C by Naveen Kumar B C
February 14, 2023
in Newsbeat, State, ರಾಜ್ಯ
D K Sudakar Saaksha Tv
Share on FacebookShare on TwitterShare on WhatsappShare on Telegram

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ – ಸಚಿವ ಡಾ.ಕೆ.ಸುಧಾಕರ್

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು.

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚೆಗೆ ಬಜೆಟ್ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು 2,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರಿಗೆ 5 ಕೋಟಿ ರೂ. ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಇರಿಸಿ, ಕಾರ್ಯಕರ್ತೆಯರ ಆರೋಗ್ಯ ರಕ್ಷಣೆಗೆ ನೀಡಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾಂತ್ರಿಕ ನ್ಯೂನತೆ ನಿವಾರಿಸಿ, ಸರಿಯಾದ ಸಮಯಕ್ಕೆ ಗೌರವಧನ ನೀಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಕೋವಿಡ್ ಸಮಯದಲ್ಲಿ ಅನೇಕರು ವರ್ಕ್ ಫ್ರಂ ಹೋಮ್ ಮಾಡಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ವರ್ಕ್ ಫ್ರಂ ಸ್ಟ್ರೀಟ್ ಮಾಡಿದ್ದರು. 10 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಅಥವಾ 60 ವಯಸ್ಸಿನ ಬಳಿಕ ನಿವೃತ್ತರಾಗಲು ಬಯಸಿದರೆ, ಅವರಿಗೆ ಇಡಿಗಂಟು ನೀಡಲು ಕ್ರಮ ವಹಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಚರ್ಚಿಸಲಾಗುವುದು. ಕೇವಲ ಮಾತಿನಲ್ಲಲ್ಲ, ಕೃತಿಯ ಮೂಲಕ ಕೊಡುಗೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾದದ್ದು. ಅಪೌಷ್ಟಿಕತೆ ನಿವಾರಿಸುವ ಪೋಷಣ್ ಅಭಿಯಾನ, ಇಂದ್ರಧನುಷ್ ಲಸಿಕಾಕರಣ ಮೊದಲಾದ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆಯರಿಂದ ಯಶಸ್ವಿಯಾಗುತ್ತಿದೆ. ಕೋವಿಡ್ ಲಸಿಕಾಕರಣದಲ್ಲಿ, 42 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಲಸಿಕೆ ನೀಡಲು ಶ್ರಮಿಸಿದ್ದರು. ಕೋವಿಡ್ ಲಸಿಕೆ ಅಭಿಯಾನದಲ್ಲಿ ಮೊದಲ ಮತ್ತು ಎರಡನೇ ಡೋಸ್ ಶೇ.100 ರಷ್ಟು ಆಗಿದ್ದು, ಇದರಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವೇ ಪ್ರಮುಖವಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ಸೇವೆಯನ್ನು ಮೆಚ್ಚಿ ವಿಶ್ವ ಆರೋಗ್ಯ ಸಂಸ್ಥೆಯು ʼಜಾಗತಿಕ ನಾಯಕರುʼ ಎಂದು ಕರೆದಿದೆ. ಆಶಾ ಎಂದರೆ ಭರವಸೆ ಎಂದರ್ಥ. ಇಡೀ ವಿಶ್ವವೇ ನಂಬಿಕೆ, ಭರವಸೆಯ ಮೇಲೆ ನಿಂತಿದೆ. ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಸಂಪೂರ್ಣ ಭರವಸೆ ಇದ್ದು, ಯಾವುದೇ ಆಶಾ ಕಾರ್ಯಕರ್ತೆಯರು ಅದನ್ನು ಹುಸಿ ಮಾಡಲಿಲ್ಲ. ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿದ್ದಾರೆ ಎಂದರು.

ಕೋವಿಡ್ ಕಾಲದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಹೆಲ್ತ್‌ಗಿರಿ ಪ್ರಶಸ್ತಿ ದೊರೆತಿದೆ. ರಾಜ್ಯದಲ್ಲೀಗ ಸಾಂಸ್ಥಿಕ ಹೆರಿಗೆ ಪ್ರಮಾಣ ಶೇ.90 ಕ್ಕೂ ಹೆಚ್ಚಿದೆ. ಆದರೆ ಇದು ಶೇ.100 ಕ್ಕೆ ತಲುಪಬೇಕು. ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣವನ್ನು ಇಳಿಕೆ ಮಾಡಬೇಕು. ಈ ವಿಚಾರದಲ್ಲಿ ಇನ್ನಷ್ಟು ಗುರಿ ಮುಟ್ಟಬೇಕಿದೆ. ನಾಗರಿಕ ಸಮಾಜದ ಅತಿ ದೊಡ್ಡ ಶತ್ರುವೇ ಅಪೌಷ್ಟಿಕತೆ. ಇದಕ್ಕೆ ಕೇವಲ ಬಡತನವೊಂದೇ ಕಾರಣವಲ್ಲ. ಎಲ್ಲಾ ಬಗೆಯ ಆಯಾಮಗಳಿಂದ ಇದನ್ನು ನೋಡಬೇಕಿದೆ ಎಂದರು.

Dr. K Sudhakar : Sincere effort to increase honorarium for Asha workers – Minister Dr. K. Sudhakar

Tags: Dr. K Sudhakar
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram