Dr. K. Sudhakar – ನ.11 ಕ್ಕೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ
ಮೈಸೂರು : ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದ ಉದ್ಯಾನ ನಿರ್ಮಾಣಕ್ಕೆ ಮೃತ್ತಿಕೆ ಸಂಗ್ರಹದ ಕೆಂಪೇಗೌಡ ರಥಕ್ಕೆ ಚಾಲನೆ ನೀಡಲಾಯಿತು.
ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.
ಬಳಿಕ ಸಚಿವ ಡಾ.ಕೆ.ಸುಧಾಕರ್, ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

ಪ್ರತಿಮೆ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉದ್ಯಾನಕ್ಕೆ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತಿದೆ.
ಕ್ಷೇತ್ರದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಐತಿಹಾಸಿಕ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ವೇಳೆ ಸಚಿವರಾದ ಡಾ.ಕೆ.ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿ ಇತರರು ಉಪಸ್ಥಿತರಿದ್ದರು.







