ಡಾ.ಮನಮೋಹನ್ ಸಿಂಗ್ ಅವರು ವಿಶ್ವದ ಶ್ರೇಷ್ಠ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು. ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು ತದನಂತರದಲ್ಲಿ ಅಂದರೆ 1982ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ ನಿಯೋಜನೆಗೊಂಡರು. ಆ ಸಮಯದಲ್ಲಿ ಪ್ರಣಬ್ ಮುಖರ್ಜಿ ಹಣಕಾಸು ಸಚಿವರಾಗಿದ್ದರೆ, ಇಂದಿರಾಗಾಂಧಿ ಪ್ರಧಾನಿಯಾಗಿದ್ದರು. ಡಾ.ಮನಮೋಹನ್ ಸಿಂಗ್ 1985 ರವರೆಗೆ ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದರು. ಆ ವೇಳೆ ಕರೆನ್ಸಿಗೆ ಸಹಿ ಹಾಕಿದ್ದ ಫೋಟೋಗಳನ್ನು ನೆಟ್ಟಿಗರು ಈಗ ಎಲ್ಲೆಡೆಯೂ ಶೇರ್ ಮಾಡುತ್ತಿದ್ದಾರೆ.
ಡಾ. ಮನಮೋಹನ್ ಸಿಂಗ್ ವಿಧಿವಶ:ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ!
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಗಳ ಹರಿಕಾರ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ....