ಜಿ.ಮಾದೇಗೌಡರ ನಿಧನಕ್ಕೆ ಸಚಿವ ಡಾ.ನಾರಾಯಣಗೌಡ ತೀವ್ರ ಸಂತಾಪ
ಹಿರಿಯ ರಾಜಕಾರಣಿ, ಮಂಡ್ಯದ ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು.
ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.
ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ನನಗೆ ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದರು. ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವ ಡಾ. ನಾರಾಯಣಗೌಡ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.










