ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಿಂದೂ-ಮುಸ್ಲಿಂ ಸಂಘರ್ಷ ಇಂದು ನಿನ್ನೆಯದಲ್ಲ. ಸದ್ಯ ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರಾಜಧಾನಿ ಮಂಗಳೂರಿನ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಲಾಗಿದೆ.
ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ. ಮಂಗಳೂರಿನ ಉಳ್ಳಾಲ ಅಂದ್ರೆ ಅದು ಪಾಕಿಸ್ತಾನವೇ ಅಲ್ವಾ? ಅದು ಬೇರೆ ಆಗೋಕೆ ಸಾಧ್ಯ ಇದೆಯಾ? ಇದೇ ರೀತಿ ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ಸಮೀಪದ ಕಿನ್ಯಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಭಾಕರ್ ಭಟ್, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇದೆ ಎಂದರು.
ನಮ್ಮ ಕಿನ್ಯಾ ಪ್ರದೇಶದ ಸುತ್ತಲೂ ಯಾರಿದ್ದಾರೆ ಎಂದು ನೋಡಿ. ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಆಗ ನಮ್ಮ ದೇವಸ್ಥಾನವನ್ನು, ದೈವಸ್ಥಾನವನ್ನು ಉಳಿಸುವವರು ಯಾರು, ನಮ್ಮ ಸಂಪ್ರದಾಯ, ಸಂಸ್ಕøತಿಯನ್ನು ಉಳಿಸುವವರು ಯಾರು, ಉಳ್ಳಾಲ ಪಾಕಿಸ್ತಾನ ಯಾಕೆ ಆಯಿತು? ಇಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇತ್ತು, ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯದ ಅನೇಕ ಪ್ರದೇಶಗಳು ಪಾಕಿಸ್ತಾನ ಆಗಿ ಹೋಗಿವೆ ಎನ್ನುವ ಮೂಲಕ ಆಗಷ್ಟ್ ತಿಂಗಳಲ್ಲಿ ಬೆಂಗಳೂರಿನ ಕೆ.ಜೆ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಾಕಿದ ಘಟನೆಯನ್ನೂ ಕಲ್ಲಡ್ಕ ಪ್ರಭಾಕರ್ ಪರೋಕ್ಷ ಹೋಲಿಕೆ ಮಾಡಿದ್ದಾರೆ. ಹೀಗಾಗಿ ಕಲ್ಲಡ್ಕ ಪ್ರಭಾಕರ್ ನೀಡಿದ ವಿವಾದಾತ್ಮಕ ಹೇಳಿಕೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel