ಬೆಂಗಳೂರು, ಸೆ.24: ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್. ಎಲ್ ಭೈರಪ್ಪ (SL Bhyrappa) ಅವರು ನಿಧನರಾಗಿದ್ದಾರೆ. 94 ವರ್ಷದ ಎಸ್ ಎಲ್ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಸ್ ಎಲ್ ಭೈರಪ್ಪ ಅವರಕ್ಕೆ ದೇಶದ ಮತ್ತು ನಾಡಿನ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
“ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು… pic.twitter.com/yAWYGxx4GI
— Narendra Modi (@narendramodi) September 24, 2025
ಸಿಎಂ ಸಿದ್ದರಾಮಯ್ಯ ಸಂತಾಪ
“ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.… pic.twitter.com/g4tZWYroHS— CM of Karnataka (@CMofKarnataka) September 24, 2025
ಕಂಬನಿ ಮಿಡಿದ ಹೆಚ್ಡಿ ಕುಮಾರಸ್ವಾಮಿ
“’ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ.
ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ಪದ್ಮಭೂಷಣ, ಹಿರಿಯ ಸಾಹಿತಿ ಡಾ. ಎಸ್.ಎಲ್ ಭೈರಪ್ಪ ನಿಧನ
ಸಂತಾಪ ಸೂಚಿಸಿದ ಮಾಜಿ ಪ್ರಧಾನಿ
“ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸಂತಾಪ ಸೂಚಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








