ಡಾ ಶ್ರೀ ಶಿವಕುಮಾರ ಸ್ವಾಮೀಜಿಗಳ  115ನೇ ಜಯಂತಿ – ಟ್ವೀಟ್ ಮಾಡಿ ನಮನ ಸಲ್ಲಿಸಿದ ಪ್ರಧಾನಿ

1 min read

ಡಾ ಶ್ರೀ ಶಿವಕುಮಾರ ಸ್ವಾಮೀಜಿಗಳ  115ನೇ ಜಯಂತಿ – ಟ್ವೀಟ್ ಮಾಡಿ ನಮನ ಸಲ್ಲಿಸಿದ ಪ್ರಧಾನಿ

ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶ್ರೀ ಶಿವಕುಮಾರ ಸ್ವಾಮೀಜಿಗಳ  115ನೇ ಜಯಂತೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ  ಶುಭ ಕೋರಿದ್ದಾರೆ.

ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ. ಎಂದು ಶಿವಕುಮಾರ ಸ್ವಾಮಿಗಳ ಜೊತೆಗಿ ಪೋಟೋವನ್ನ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.

ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ  ತ್ರಿವಿಧ ದಾಸೋಹಿ  ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ‘ನಡೆದಾಡುವ ದೇವರ ಬಸವ ಭಾರತ’  ಎಂಬ   ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಸಲಾಗುತ್ತಿದೆ.

ಇಂದು (ಏಪ್ರಿಲ್ 1) ದಿನಪೂರ್ತಿ ಕಾರ್ಯಕ್ರಮ ಇರಲಿದ್ದು ಸುಮಾರು 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಆಗಮಿಸಿದವರಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮಗಳು ಇರಲಿದೆ.

ಇನ್ನೂ ನಡೆದಾಡುವ ದೇವರ ಜಯಂತೋತ್ಸವ ಹಿನ್ನಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ತುಮಕೂರಿಗೆ ಆಗಮಿಸಿದ್ದಾರೆ.  ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಮೇಲೆ ಹೂವಿನ ಮಳೆಗೈದು ಅದ್ಧೂರಿ ಸ್ವಾಗತ ಕೋರಲಾಗಿದೆ. ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾಗೆ ಅದ್ಧೂರಿ ಸ್ವಾಗತ ಲಭಿಸಿದೆ. ವಿದ್ಯಾರ್ಥಿಗಳು ಅಮಿತ್ ಶಾಗೆ ಪೂರ್ಣಕುಂಭ ಸ್ವಾಗತ ಕೋರಿದ್ದಾರೆ. ನಂತರ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಶಾ, ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd