ರಾಜ್ಯಸಭೆಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನೇಮಕ – ಗಣ್ಯರ ಅಭಿನಂದನೆ
ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ. ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಮತ್ತು ಕಥೆಗಾರ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದಾರೆ. ಅವರ ಕೊಡುಗೆಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಮನ್ನಣೆಯನ್ನು ಪಡೆದಿದ್ದಾರೆ.
ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great work he is doing in health, education and culture. He will certainly enrich Parliamentary proceedings. pic.twitter.com/tMTk0BD7Vf
— Narendra Modi (@narendramodi) July 6, 2022
ಧರ್ಮ ಸಂರಕ್ಷಣೆ ಜೊತೆಗೆ ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಸಮಾಜ ನಿಷ್ಠರಾಗಿ ಅದ್ವಿತೀಯ ಸೇವೆ ಸಲ್ಲಿಸುತ್ತಿರುವ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ನೇಮಕಗೊಂಡಿರುವುದು ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ನಲ್ಲಿ ತಿಳಿಸಿದ್ದಾರೆ. Dr Veerendra Heggade nominated to Rajya Sabha