ಧರ್ಮಸ್ಥಳದ ಬಗ್ಗೆ ಹರಿದಾಡುತ್ತಿರುವ ಅಪಪ್ರಚಾರ ಆರೋಪದ ನಡುವೆಯೇ ಮಹತ್ವದ ಬೆಳವಣಿಗೆ ನಡೆದಿದೆ. ಸಾಧು-ಸಂತರ ದೆಹಲಿ ಭೇಟಿಯ ನಂತರ ಈಗ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶೀಘ್ರದಲ್ಲೇ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಸೆಪ್ಟೆಂಬರ್ 8ರಂದು ನಿಗದಿಯಾಗಿರುವ ಈ ಭೇಟಿ ಸಂದರ್ಭದಲ್ಲಿ, ಹೆಗ್ಗಡೆ ಅವರು ಧರ್ಮಸ್ಥಳದ ವಿರುದ್ಧ ಹರಿದಾಡುತ್ತಿರುವ ಅಪಪ್ರಚಾರ, ಜನರ ಅನುಮಾನಗಳು ಹಾಗೂ ಧಾರ್ಮಿಕ ಭಾವನೆಗಳ ಕುರಿತಂತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾತನಾಡಿದ ಜೈನ ಮುನಿ ಗುಣಧರನಂದಿ ಮಹಾರಾಜ ಅವರು, ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದ ಪ್ರತಿಷ್ಠೆಯನ್ನು ಕಾಯ್ದುಕೊಳ್ಳಲು ಹಾಗೂ ಸತ್ಯಾಂಶವನ್ನು ಸ್ಪಷ್ಟಪಡಿಸಲು ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಹಿತಿ ನೀಡಿದರು.
ಈ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದ ವಿಚಾರದಲ್ಲಿ ಮುಂದಿನ ರಾಜಕೀಯ ಬೆಳವಣಿಗೆ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.








